ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 9 JANUARY 2023
ತೀರ್ಥಹಳ್ಳಿ : ಮನೆ ಮುಂದೆ ನಿಲ್ಲಿಸಿದ್ದ ಪಿಕಪ್ ವಾಹನಕ್ಕೆ ಪೊಲೀಸರೆ ಮರಳು (sand) ತುಂಬಿ ವಾಹವನ್ನು ಸೀಜ್ ಮಾಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ತೀರ್ಥಹಳ್ಳಿ (Thirthahalli) ತಾಲೂಕು ಮಾಳೂರು ಪೊಲೀಸ್ ಠಾಣೆ (malur police station) ಮುಂಭಾಗ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
‘ಮರಳು ತುಂಬಿದವರಾರು?’
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು, ‘ಹೆದ್ದೂರು ಬಳಿ ಮನೆಯೊಂದರ ಮುಂದೆ ಪಿಕಪ್ ವಾಹನಕ್ಕೆ ಪೊಲೀಸರೆ ಮರಳು (sand) ತುಂಬಿದ್ದಾರೆ. ಅದನ್ನು ತಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಿಕಪ್ ವಾಹನಕ್ಕೆ ಮರಳು ತುಂಬಿದ ಪೊಲೀಸರನ್ನು ಕೂಡಲೆ ಅಮಾನತು ಮಾಡಬೇಕು. ಬಿಜೆಪಿಯವರು ಅವ್ಯಾಹತವಾಗಿ ಮರಳು ದಂಧೆ ನಡೆಸುತ್ತಿದ್ದಾರೆ. ಅವರನ್ನು ತಡೆಯಲು ಪೊಲೀಸರು ಮುಂದಾಗುತ್ತಿಲ್ಲ. ಆದರೆ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಸುಖಾಸುಮ್ಮನೆ ಪ್ರಕರಣ ದಾಖಲು ಮಾಡುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ – ಕೊನೆವರೆಗು ಹೋರಾಡಿದ ಉದ್ಯಮಿ ಶರತ್ ಭೂಪಾಳಂ, ಭಾನುವಾರ ಬೆಳಗಿನ ಜಾವ ಏನೇನಾಯ್ತು?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422