ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 25 ಜುಲೈ 2019
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ನಿಯಮ ಉಲ್ಲಂಘಿಸಿ ನದಿ ಮಧ್ಯ ಭಾಗದಿಂದ ಮರಳು ತೆಗೆಯುತ್ತಿದ್ದ ಆರೋಪದ ಮೇಲೆ, ತೀರ್ಥಹಳ್ಳಿ ತಾಲೂಕಿನ ಹುಣಸವಳ್ಳಿಯಲ್ಲಿ ಮರಳು ಗಣಿಗಾರಿಕೆಯ ಗುತ್ತಿಗೆಯನ್ನು ರದ್ದುಪಡಿಸಲಾಗಿದೆ.
ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಅವರ ಆದೇಶದ ಮೇರೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಹುಣಸವಳ್ಳಿಯ ಸರ್ವೇ ನಮಬರ್ 11,12 ಮತ್ತು 13ರಲ್ಲಿ ಮರಳು ಗಣಿಗಾರಿಕೆ ನಡೆಸಲು ನೀಡಿದ್ದ ಗುತ್ತಿಗೆಯನ್ನು ರದ್ದುಪಡಿಸಿದೆ. ಭದ್ರಾವತಿಯ ಬಸವೇಶ್ವರ ಟ್ರೇಡಿಂಗ್ ಸಂಸ್ಥೆಗೆ 2018ರಿಂದ ಐದು ವರ್ಷ ಮರಳು ಗಣಿಗಾರಿಕೆಗೆ ಗುತ್ತಿಗೆ ನೀಡಲಾಗಿತ್ತು. ಆದರೆ ನಿಯಮ ಉಲ್ಲಂಘಿಸಿದ್ದರಿಂದ ಗುತ್ತಿಗೆ ರದ್ದುಪಡಿಸಲು ಸೂಚಿಸಲಾಗಿದೆ.
ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಸಂಬಂಧ ವಕೀಲ ಕುಮಾರ್ ಆಚಾರ್ ಅವರು ಹೈಕೋರ್ಟ್’ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಅವರು ಸಲ್ಲಿಸಿದ್ದ ಫೋಟೊಗಲು ಮತ್ತು ದಾಖಲಾತಿಯನ್ನು ಸಾಕ್ಷ್ಯವಾಗಿ ಪರಿಗಣಿಸಿದ ನ್ಯಾಯಾಲಯ ಪ್ರಕರಣದ ಅನುಸಾರಣಾ ವರದಿ ನೀಡುವಂತೆ ಜಿಲ್ಲಾಡಳಿತಕ್ಕೆ ಜುಲೈ 9ರಂದು ಹೈಕೊರ್ಟ್ ಆದೇಶಿಸಿತ್ತು.
ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಅವರು ಮರಳುಗಾರಿಗೆ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದರು. ಇದರ ವಿಡಿಯೋ ಇಲ್ಲಿದೆ
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]