ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 17 ಜುಲೈ 2020
ಬೆಂಗಳೂರು ಸೇರಿದಂತೆ ಹೊರ ಜಿಲ್ಲೆ, ರಾಜ್ಯದಿಂದ ಬಂದವರ ಕುರಿತು ಜಿಲ್ಲೆಯಲ್ಲಿ ಆತಂಕ ಸೃಷ್ಟಿಯಾಗಿದೆ. ಇವರಿಂದಲೇ ಕರೋನ ಹರಡುವ ಸಾದ್ಯತೆ ಹೆಚ್ಚಿದೆ. ಇದೇ ಕಾರಣಕ್ಕೆ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ತಮ್ಮ ಮಗನನ್ನೇ ಸ್ವಯಂ ಕ್ವಾರಂಟೈನ್ಗೆ ಒಳಪಡಿಸಿ, ಉಳಿದವರಿಗೆ ಮಾದರಿಯಾಗಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸ್ವಯಂ ಕ್ವಾರಂಟೈನ್ಗೆ ಒಳಪಡಿಸಿದ್ದೇಕೆ?
ಬೆಂಗಳೂರಿನಿಂದ ಹಿಂತಿರುಗಿದ ಕಾರಣಕ್ಕೆ ಮಗನನ್ನು ಸ್ವಯಂ ಕ್ವಾರಂಟೈನ್ಗೆ ಒಳಪಡಿಸಿದ್ದಾರೆ ಶಾಸಕ ಆರಗ ಜ್ಞಾನೇಂದ್ರ. ಕರೋನ ನಿಯಂತ್ರಣಕ್ಕೆ ತೀರ್ಥಹಳ್ಳಿಯಲ್ಲಿ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಿಂದ ಬಂದಿರುವ ನನ್ನ ಮಗನನ್ನು ಮನೆಯ ಹೊರಭಾಗದಲ್ಲಿ ಕ್ವಾರಂಟೈನ್ ಮಾಡಿದ್ದೇವೆ ಎಂದು ಸಭೆಗೆ ತಿಳಿಸಿದರು.
ಹೊರಗಿನಿಂದ ಬಂದವರನ್ನು ಕ್ವಾರಂಟೈನ್ ಮಾಡಿ
ಹೊರಗಿನಿಂದ ಬಂದವರನ್ನು ಗುರುತಿಸಿ ಅವರನ್ನು ಕನಿಷ್ಠ ಎರಡು ವಾರ ಕ್ವಾರಂಟೈನ್ಗೆ ಮನವೊಲಿಸಬೇಕಿದೆ ಎಂದು ತಿಳಿಸಿದ ಶಾಸಕ ಆರಗ ಜ್ಞಾನೇಂದ್ರ, ಪಟ್ಟಣದಲ್ಲಿ ಬೆಂಗಳೂರಿನಿಂದ ಬಂದವರಲ್ಲೇ ಕರೋನ ಪಾಸಿಟಿವ್ ಕಾಣಿಸಿಕೊಂಡಿದೆ. ಕಳ್ಳಿಗದ್ದೆಯಲ್ಲಿ ಒಂದೇ ಮನೆಯಲ್ಲಿ ಏಳು ಮಂದಿಗೆ ಸೋಂಕು ತಗುಲಿದೆ ಎಂದರು.
ತಾಲೂಕಲ್ಲೂ ಕೋವಿಡ್ ಕೇರ್ ಸೆಂಟರ್ ಬೇಕು
ಸೋಂಕಿತರ ಸಂಖ್ಯೆ ಹೆಚ್ಚಳದ ಬೆನ್ನಿಗೆ ಜಿಲ್ಲಾ ಕೇಂದ್ರದಲ್ಲಿರುವ ಕೋವಿಡ್ ಕೇರ್ ಸೆಂಟರ್ಗಳು ಭರ್ತಿಯಾಗಿವೆ. ಹಾಗಾಗಿ ತೀರ್ಥಹಳ್ಳಿ ತಾಲೂಕಿನಲ್ಲೂ ಕೋವಿಡ್ ಕೇರ್ ಸೆಂಟರ್ ತೆರೆಯಬೇಕಿದೆ ಎಂದರು.
ತಹಶೀಲ್ದಾರ್ ಡಾ.ಎಸ್.ಬಿ.ಶ್ರೀಪಾದ್, ತಾಲೂಕು ಪಂಚಾಯಿತಿ ಸದಸ್ಯ ಪ್ರಶಾಂಕ್ ಕುಕ್ಕೆ, ಟಿಹೆಚ್ಒ ಡಾ.ಅಶೋಕ್, ಪಟ್ಟಣ ಪಂಚಾಯಿತಿ ಸಿಒ ನಾಗೇಂದ್ರ ಕುಮಾರ್, ಡಾ.ಗಣೇಶ್ ಕಾಮತ್, ಡಾ. ನಟರಾಜ್ ಸೇರಿದಂತೆ ಹಲವರು ಸಭೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]