ರಾಜ್ಯಾದ್ಯಂತ ಜಿಮ್‌ಗಳಲ್ಲಿ ತನಿಖೆಗೆ ಆಗ್ರಹ, ಶಿಕಾರಿಪುರ, ತೀರ್ಥಹಳ್ಳಿಯಲ್ಲಿ ಪ್ರತಿಭಟನೆ

Published On : ಏಪ್ರಿಲ್ 9, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ಹುಬ್ಬಳ್ಳಿಯ ಫಿಟ್ನೆಸ್ ಜಿಮ್‌ವೊಂದರಲ್ಲಿ (gym) ನಡೆದಿದೆ ಎನ್ನಲಾದ ಸಂಘಟಿತ ಲೈಂಗಿಕ ಶೋಷಣೆ, ಬ್ಲ್ಯಾಕ್‌ಮೇಲ್ ಹಾಗೂ ಮತಾಂತರ ಯತ್ನ ಪ್ರಕರಣವನ್ನು ಖಂಡಿಸಿ ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಗುರುವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಹುಬ್ಬಳ್ಳಿಯ ಸಮೀರ್ ಮುಲ್ಲಾ ಮತ್ತು ಆತನ ಸಹೋದರಿ ತೈಸೀಮ್ ಮುಲ್ಲಾ ಈ ಕೃತ್ಯದ ಕಿಂಗ್‌ಪಿನ್‌ಗಳಾಗಿದ್ದು, ಇವರು ಜಿಮ್‌ಗೆ ಬರುವ ಹಿಂದೂ ಯುವತಿಯರಿಗೆ ಪಾನೀಯದಲ್ಲಿ ಮಾದಕ ದ್ರವ್ಯ ಬೆರೆಸಿ ಅತ್ಯಾಚಾರವೆಸಗುತ್ತಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಯುವತಿಯರ ಅರೆನಗ್ನ ಚಿತ್ರ ಹಾಗೂ ವಿಡಿಯೊಗಳನ್ನು ಸೆರೆಹಿಡಿದು, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ಹಣ ವಸೂಲಿ ಮಾಡಲಾಗುತ್ತಿದೆ ಹಾಗೂ ಮತಾಂತರಕ್ಕೆ ಒತ್ತಾಯಿಸಲಾಗುತ್ತಿದೆ ಎಂದು ಸಮಿತಿ ಸದಸ್ಯರು ಆತಂಕ ವ್ಯಕ್ತಪಡಿಸಿದರು.

ರಾಜ್ಯಾದ್ಯಂತ ತನಿಖೆಗೆ ಆಗ್ರಹ

ಹುಬ್ಬಳ್ಳಿ ಮಾತ್ರವಲ್ಲದೆ, ಉತ್ತರ ಪ್ರದೇಶ, ಮಧ್ಯಪ್ರದೇಶ ಹಾಗೂ ಪಶ್ಚಿಮ ಬಂಗಾಳದ ಮಾದರಿಯಲ್ಲಿ ರಾಜ್ಯದಾದ್ಯಂತ ಜಿಮ್‌ಗಳ ಹೆಸರಿನಲ್ಲಿ ಇಂತಹ ಜಾಲಗಳು ಸಕ್ರಿಯವಾಗಿರುವ ಸಾಧ್ಯತೆ ಇದೆ. ಆದ್ದರಿಂದ ಈ ಪ್ರಕರಣದ ತನಿಖೆಗೆ ವಿಶೇಷ ತನಿಖಾ ದಳ (SIT) ರಚಿಸಬೇಕು. ಆರೋಪಿಗಳ ಮೇಲೆ ಕೋಕಾ, ಪೋಕ್ಸೋ ಹಾಗೂ ಮತಾಂತರ ವಿರೋಧಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ಫಾಸ್ಟ್ ಟ್ರ್ಯಾಕ್ ಕೋರ್ಟ್‌ನಲ್ಲಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದರು.

Hindu-Jagarana-Vedike-urges-for-SIT-in-GYM-cases.avif

ಈ ಸಂಬಂಧ ಹಿಂದೂ ಜಾಗರಣ ಸಮಿತಿ ವತಿಯಂದ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿಗೆ, ತೀರ್ಥಹಳ್ಳಿ, ಶಿಕಾರಿಪುರದ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು ಎಂದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ಸೂಳೆಬೈಲಿನಲ್ಲಿ ಶೆಡ್‌ ಮೇಲೆ ತುಂಗಾ ನಗರ ಠಾಣೆ ಪೊಲೀಸರ ದಾಳಿ, ದಾಖಲಾಯ್ತು ಕೇಸ್‌

JNN College of Engineering Admissions started

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 9, 2026

Leave a Comment