ಆಗುಂಬೆ: ಅಪಘಾತಕ್ಕೀಡಾದ ಕಾರಿನಲ್ಲಿದ್ದ ಮೊಬೈಲ್ ಫೋನ್‌ಗಳು (Smart Phones) ಮತ್ತು ಪರ್ಸ್ ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಶಾಜ್ಮಾನ್ ಎಂಬುವವರು ಸಹೋದರನಿಗೆ ತೀರ್ಥಹಳ್ಳಿಯ ನಾಟಿ ವೈದ್ಯರೊಬ್ಬರ ಬಳಿ ಚಿಕಿತ್ಸೆಗೆ ಕರೆತರುತ್ತಿದ್ದರು. ಕೌರಿಹಕ್ಲುವಿನಲ್ಲಿ ಕಾರು ಅಪಘಾತಕ್ಕೀಡಾಗಿ, ಕಾರಿನಲ್ಲಿದ್ದವರನ್ನು ಆಂಬುಲೆನ್ಸ್‌ನಲ್ಲಿ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಚಿಕಿತ್ಸೆ ಬಳಿಕ ಬಂದು ಪರಿಶೀಲಿಸಿದಾಗ ಕಾರಿನಲ್ಲಿದ್ದ ₹1.17 ಲಕ್ಷದ ಐ ಫೋನ್, ₹30 ಸಾವಿರದ ಸ್ಯಾಮ್‌ಸಂಗ್ ಫೋನ್, ಪರ್ಸ್ ಮತ್ತು ಅದರೊಳಗಿದ್ದ ₹15 ಸಾವಿರ ನಗದು ಕಳ್ಳತನವಾಗಿತ್ತು. ಈ ಸಂಬಂಧ ಕಾರು ಮಾಲೀಕ ಶಾಜ್ಮಾನ್ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಬೆಳ್ಳಂಬೆಳಗ್ಗೆ ನಿರ್ಮಾಣ ಹಂತದ ಮನೆ ಬಳಿ ಬಂದ ಮಾಲೀಕನಿಗೆ ಕಾದಿತ್ತು ಶಾಕ್, ಆಗಿದ್ದೇನು?
