ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 08 JANUARY 2021
ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ಆರ್ಟ್ ಆಫ್ ಲಿವಿಂಗ್ನ ಶ್ರೀ ರವಿಶಂಕರ ಗುರೂಜಿ ಭೇಟಿ ನೀಡಿದ್ದರು. ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಬಗ್ಗೆ ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೆ ವೇಳೆ ದೇಗುಲ ಸಮಿತಿಯಿಂದ ಶ್ರೀಗಳನ್ನು ಸನ್ಮಾನಿಸಲಾಯಿತು.
ತುಂಗಾ ನದಿ ಬಂಡೆ ಮೇಲೆ ಧ್ಯಾನ
ತುಂಗಾ ನದಿಯ ದಂಡೆಯ ಮೇಲೆ ಶ್ರೀ ರಾಮ ಮಂಟಪಕ್ಕೂ ಶ್ರೀ ರವಿಶಂಕರ್ ಗುರೂಜಿ ಭೇಟಿ ನೀಡಿದ್ದರು. ನದಿ ನಡುವೆ ಇರುವ ಬಂಡೆ ಮೇಲೆ ಕೆಲ ಹೊತ್ತು ಧ್ಯಾನ ಮಾಡಿದ್ದಾರೆ.
ತಹಶೀಲ್ದಾರ್ ಡಾ.ಶ್ರೀಪಾದ, ಮುಖ್ಯ ಅರ್ಚಕ ರಾಜಶೇಖರ ಭಟ್, ರಾಕೇಶ್ ಭಟ್, ಜೀರ್ಣೋದ್ಧಾರ ಸಮಿತಿಯ ಸೊಪ್ಪುಗುಡ್ಡೆ ರಾಘವೇಂದ್ರ, ಹೆಚ್.ಪಾಂಡುರಂಗಪ್ಪ, ರಾಜಸ್ವ ನಿರೀಕ್ಷಕ ಮಂಜುನಾಥ್, ಪಿಎಸ್ಐ ಎಲ್ಲಪ್ಪ, ಸುರಭಿ ಕಿಶೋರ್, ಅನಿಲ್ ಕುಮಾರ್, ವಸಂತ ಇದ್ದರು.
ಕಮಲಶಿಲೆಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಮಾರ್ಗ ಮಧ್ಯೆ ತೀರ್ಥಹಳ್ಳಿಗೆ ಭೇಟಿ ನೀಡಿದ್ದರು. ನಂತರ ಉದ್ಯಮಿ ಬಾಳಗಾರು ಶ್ರೀಧರ ಶೆಟ್ಟಿ ಕುಟುಂಬದವರ ಅತಿಥ್ಯ ಸ್ವೀಕರಿಸಿದರು ಎಂದು ತಿಳಿದು ಬಂದಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422