ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 27 MARCH 2021
ನ್ಯಾಯಬೆಲೆ ಅಂಗಡಿಯಲ್ಲಿ ಕಲ್ಲು, ಮಣ್ಣು ಮಿಶ್ರಿತ ಗೋಧಿ ವಿತರಣೆ ಮಾಡಲಾಗುತ್ತಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಆರೋಪಿಸಿದ್ದಾರೆ. ಕಲಬೆರಕೆ ಗೋಧಿಯನ್ನು ತಾಲೂಕು ಕಚೇರಿಯಲ್ಲಿರುವ ಆಹಾರ ವಿಭಾಗದ ಶಿರಸ್ತೇದಾರ್ ಅವರಿಗೆ ಪ್ರದರ್ಶಿಸಿ ಕ್ರಮಕ್ಕೆ ಆಗ್ರಹಿಸಿದರು.
ಮಂಡಗದ್ದೆ ಹೋಬಳಿ ಸಿಂಗನಬಿದಿರೆ ನ್ಯಾಯಬೆಲೆ ಅಂಗಡಿಯಲ್ಲಿ ಕಲಬೆರಕೆ ಗೋಧಿ ವಿತರಿಸಲಾಗುತ್ತಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಟಿ.ಟಿ.ತಿಮ್ಮಪ್ಪ ಆರೋಪಿಸಿದ್ದಾರೆ.
ತಾಲೂಕು ಪಂಚಾಯಿತಿಗೆ ಭೇಟಿ ನೀಡಿದ ಉಪ ವಿಭಾಗಾಧಿಕಾರಿ ಪ್ರಕಾಶ್ ಅವರಿಗೂ ಕಲಬೆರಕೆ ಗೋಧಿ ಪ್ರದರ್ಶಿಸಿದ ತಿಮ್ಮಪ್ಪ, ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]