ತೀರ್ಥಹಳ್ಳಿ: ನೊಣಬೂರು ಗ್ರಾಮದ ಅಂಬುತೀರ್ಥ ಅರಣ್ಯ ಪ್ರದೇಶದಲ್ಲಿ ಅತಂತ್ರವಾಗಿದ್ದ ಚಿರತೆ ಮರಿಯನ್ನು (leopard cub) ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಗ್ರಾಮಸ್ಥರು ಸೇರಿ ಯಶಸ್ವಿಯಾಗಿ ರಕ್ಷಿಸಿದ್ದಾರೆ. ಆಹಾರದ ಅಭಾವದಿಂದ ಕೂಗುತ್ತಿದ್ದ ಮರಿಯು ನಾಯಿಗಳ ದಾಳಿಗೆ ತುತ್ತಾಗುವ ಸಾಧ್ಯತೆಯಿತ್ತು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಸ್ಥಳೀಯರು ಮರಿಯನ್ನು ಸುರಕ್ಷಿತವಾಗಿ ಪತ್ತೆಹಚ್ಚಿ, ಹೆಚ್ಚಿನ ಚಿಕಿತ್ಸೆಗಾಗಿ ಇಲಾಖೆಯ ವಶಕ್ಕೆ ಒಪ್ಪಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ಚಿರತೆಯೊಂದು ಪ್ರಾಣಿಗಳಿಗೆ ಹೊಂಚು ಹಾಕುತ್ತಿತ್ತು. ಒಂದೆರಡು ಹಸುಗಳನ್ನು ಬೇಟೆಯಾಡಿರುವ ಶಂಕೆಯೂ ಇತ್ತು.

ಅಧಿಕಾರಿ ವಿಕ್ರಂ ಚೇತನ್ ನೇತೃತ್ವದಲ್ಲಿ ಪಂಚಾಯತ್ ಸದಸ್ಯರು ಹಾಗೂ ಗ್ರಾಮಸ್ಥರು ನಡೆಸಿದ ಜಂಟಿ ಕಾರ್ಯಾಚರಣೆಯಿಂದ ಈಗ ಮರಿ ರಕ್ಷಣೆಯಾಗಿದೆ. ಆದರೆ ಮರಿಯನ್ನು ಕಳೆದುಕೊಂಡ ತಾಯಿ ಚಿರತೆ ಗ್ರಾಮದ ಸುತ್ತಮುತ್ತಲೇ ಹುಡುಕಾಟ ನಡೆಸುವ ಸಾಧ್ಯತೆ ಇದೆ. ಸಾರ್ವಜನಿಕರು ಜಾಗರೂಕರಾಗಿ ಇರುವಂತೆ ಅರಣ್ಯ ಇಲಾಖೆಯು ಎಚ್ಚರಿಕೆ ನೀಡಿದೆ.
ಅರಣ್ಯ ಇಲಾಖೆ ಅಧಿಕಾರಿ ವಿಕ್ರಂ ಚೇತನ್ ನೇತೃತ್ವದಲ್ಲಿ ಸಿಬ್ಬಂದಿ ವಿಧ್ವಾನ್, ದಿನೇಶ್, ಪಂಚಾಯತ್ ಸದಸ್ಯರಾದ ನಾಗರಾಜ್, ಅರುಣ್ ಮಲ್ಲೇಸರ, ಚಂದ್ರಮತಿ ಮಂಜುನಾಥ್, ಗ್ರಾಮಸ್ಥರಾದ ನಾಗೇಶ್ ಅಡಿಗರು, ಅನಂತರಾಮ್, ಶಿವಣ್ಣ, ಪಾಂಡುರಂಗ ಸೇರಿ ಹಲವು ಚಿರತೆ ಮರಿ ರಕ್ಷಣೆ ಕಾರ್ಯಾಚರಣೆ ನಡೆಸಿದರು.
ಇದನ್ನೂ ಓದಿ – ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





