ತೀರ್ಥಹಳ್ಳಿ: ಮಂಡಿ, ಕಾಲು ನೋವು (leg pain) ಕಾಣಿಸಿಕೊಂಡಿದ್ದ ಬಾಣಂತಿಯನ್ನು ಮಂಗಳವಾರ ಇಲ್ಲಿನ ಜೆ.ಸಿ.ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಹಾಲಿನ ಪ್ಯಾಕೆಟ್ ಕಳ್ಳರ ಹಾವಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ
ಕಾವ್ಯ ಸಿ.ಡಿ. (29) ಮೃತರು. ಕೋಣಂದೂರು ಸಮೀಪದ ದೇಮ್ಲಾಪುರ ಗ್ರಾಮದ ಕಾವ್ಯ 5 ವರ್ಷಗಳ ಹಿಂದೆ ಮೇಳಿಗೆ ಗ್ರಾಮದ ಮಂಜುನಾಥ ಜತೆ ವಿವಾಹವಾಗಿದ್ದರು. ಗರ್ಭಿಣಿಯಾಗಿದ್ದ ಅವರಿಗೆ ಜನವರಿ 1 ರಂದು ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಕರೆತಂದಾಗ ಹೊಟ್ಟೆಯಲ್ಲಿಯೇ ಮಗು ಮೃತಪಟ್ಟಿರುವುದು ತಿಳಿದು ಬಂದಿತ್ತು.

ಅದಾದ ನಂತರ ದೇಮ್ಲಾಪುರದ ತಾಯಿ ಮನೆಯಲ್ಲಿ ಆರೈಕೆಯಲ್ಲಿದ್ದ ಅವರಿಗೆ ಏಕಾಏಕಿ ಮಂಡಿ ನೋವು ಕಾಣಿಸಿಕೊಂಡಿತ್ತು. ಸ್ಥಳೀಯರೊಬ್ಬರ ಕಾರಿನಲ್ಲಿಯೇ ಆಸ್ಪತ್ರೆಗೆ ಕರೆತರಲು ಕುಟುಂಬದವರು ಮುಂದಾದರು. ಆದರೆ ಆಸ್ಪತ್ರೆ ತಲುಪುವ ಮುನ್ನವೇ ಅವರು ಅಸುನೀಗಿದ್ದಾರೆ. ಸ್ಥಳಕ್ಕೆ ತಹಶೀಲ್ದಾರ್ ಎಸ್.ರಂಜಿತ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








