ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 26 JANUARY 2023
THIRTHAHALLI | ಹಲ್ಲೆಗೊಳಗಾಗಿರುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧದ ಎಫ್ಐಆರ್ ರದ್ಧತಿಗೆ ಆಗ್ರಹಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ದಿಢೀರ್ ಪ್ರತಿಭಟನೆ (Protest) ಆರಂಭಿಸಿದ್ದಾರೆ. ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದಾರೆ.
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಜೊತೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಡಿವೈಎಸ್ಪಿ ಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಪ್ರತಿಭಟನೆ (Protest) ನಡೆಸುತ್ತಿದ್ದಾರೆ.
ಹೋರಾಟಕ್ಕೆ ಕಾರಣವೇನು?
‘ಪಟ್ಟಣದ ಹೊಟೇಲ್ ಒಂದರಲ್ಲಿ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಬಿಜೆಪಿಯ ಮೂವರು ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿದವರ ಮೇಲೆ ಪ್ರಕರಣ ದಾಖಲಿಸದೆ ಹಲ್ಲೆಗೆ ಒಳಗಾದವರ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಈ ಕೂಡಲೆ ಎಫ್ಐಆರ್ ರದ್ದಾಗಬೇಕು’ ಎಂದು ಕಿಮ್ಮನೆ ರತ್ನಾಕರ್ ಪಟ್ಟು ಹಿಡಿದರು.
ಇಡೀ ರಾತ್ರಿ ಪ್ರತಿಭಟನೆ
ಡಿವೈಎಸ್ಪಿ ಕಚೇರಿ ಮುಂಭಾಗ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಹೋರಾಟ ನಡೆಸಿದರು. ಪಟ್ಟಣ ಪಂಚಾಯಿತಿ ಸದಸ್ಯ ಜಯಪ್ರಕಾಶ ಶೆಟ್ಟಿ, ನಮ್ರತ್, ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಆದರ್ಶ ಹುಂಚದಕಟ್ಟೆ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಳಕೆರೆ ಪೂರ್ಣೇಶ್, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಮರನಾಥ ಶೆಟ್ಟಿ, ಅಶ್ವಲ್, ಫಣಿರಾಜ್, ಸುಜಿತ್ ಸಾಲ್ಯಾನ್ ಸೇರಿದಂತೆ ಹಲವರು ಪಾಲ್ಗೊಂಡಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ JOB FAIR, ಇನ್ಫೋಸಿಸ್, ಬೆಂಗಳೂರು ಏರ್ ಪೋರ್ಟ್ ಸೇರಿ 40ಕ್ಕೂ ಹೆಚ್ಚು ಕಂಪನಿ ಭಾಗಿ, ನೋಂದಣಿ ಶುರು
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422