ಲಾಡ್ಜ್‌ ಕೊಠಡಿಯಲ್ಲಿ ತೀರ್ಥಹಳ್ಳಿ ತಹಶೀಲ್ದಾರ್‌ ಮೃತದೇಹ ಪತ್ತೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIMOGA NEWS, 17 OCTOBER 2024 : ಕಾರ್ಯನಿಮಿತ್ತ ಬೆಂಗಳೂರಿಗೆ ತೆರಳಿದ್ದ ತೀರ್ಥಹಳ್ಳಿ ತಹಶೀಲ್ದಾರ್‌ ಜೆ.ಬಿ.ಜಕ್ಕಣಗೌಡರ್‌ (54) ಲಾಡ್ಜ್‌ವೊಂದರ (Lodge) ಕೊಠಡಿಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿರುವ ಕುರಿತು ಪೊಲೀಸರು ಶಂಕಿಸಿದ್ದಾರೆ.

ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ವೈಭವ್ ಲಾಡ್ಜ್‌ನ ಕೊಠಡಿಯಲ್ಲಿ ಬುಧವಾರ ರಾತ್ರಿ ‌ಮೃತದೇಹ ಪತ್ತೆಯಾಗಿದೆ. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ನ್ಯಾಯಾಲಯದ ಕೆಲಸಕ್ಕೆ ತೆರಳಿದ್ದರು

ನ್ಯಾಯಾಲಯದ ಕೆಲಸ ನಿಮಿತ್ತ ತಹಶೀಲ್ದಾರ್‌ ಜೆ.ಬಿ.ಜಕ್ಕಣಗೌಡರ್‌ ಬೆಂಗಳೂರಿಗೆ ತೆರಳಿದ್ದರು. ವೈಭವ್ ಲಾಡ್ಜ್‌ನಲ್ಲಿ ಉಳಿದಿದ್ದರು. ಮಂಗಳವಾರ ಸಂಜೆಯಿಂದಲೂ ಜಕ್ಕಣಗೌಡರ್‌ ಅವರು ಯಾರ ಸಂಪರ್ಕಕ್ಕೂ ಅವರು ಸಿಕ್ಕಿರಲಿಲ್ಲ.

Thirthahalli-Tahasildhar-jakkanagowder

ಇದನ್ನೂ ಓದಿ » ಶಿವಮೊಗ್ಗ, ಭದ್ರಾವತಿಯಲ್ಲಿ ಮಳೆ ಅಬ್ಬರ, ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

ನಂತರ ಮೊಬೈಲ್ ಲೊಕೇಶನ್ ಪರಿಶೀಲನೆ ನಡೆಸಿದಾಗ ಮೆಜೆಸ್ಟಿಕ್ ಸಮೀಪ ತೋರಿಸುತ್ತಿತ್ತು.‌ ಅದನ್ನು ಆಧರಿಸಿ ಪರಿಶೀಲನೆ ನಡೆಸಿದಾಗ ವೈಭವ್ ಲಾಡ್ಜ್ ಕೊಠಡಿಯಲ್ಲಿ ಮೃತದೇಹ ಪತ್ತೆಯಾಗಿದೆ. ‘ಮೃತ ದೇಹದ ಮರಣೋತ್ತರ ಪರೀಕ್ಷೆಯ ಬಳಿಕ ಸಾವಿಗೆ ಕಾರಣ ಗೊತ್ತಾಗಲಿದೆ’ ಎಂದು ಪೊಲೀಸರು ‌ತಿಳಿಸಿದ್ದಾರೆ.

PACE-COLLEGE-PRAJNA-NEWS-ADVT

Leave a Comment