ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 14 JANUARY 2024
THIRTHAHALLI : ಇತಿಹಾಸ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆ ಅಂಗವಾಗಿ ತುಂಗಾ ನದಿಯಲ್ಲಿ ಅದ್ಧೂರಿ ತೆಪ್ಪೋತ್ಸವ ನಡೆಯಿತು. ತೀರ್ಥಹಳ್ಳಿ ಮತ್ತು ಹೊರ ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಾರು ಜನರು ತೆಪ್ಪೋತ್ಸವ ಕಣ್ತುಂಬಿಕೊಂಡರು.
ಶನಿವಾರ ರಾತ್ರಿ ತೀರ್ಥಹಳ್ಳಿಯ ತುಂಗಾ ನದಿಯಲ್ಲಿ ವೈಭವದ ತೆಪ್ಪೋತ್ಸವ ನಡೆಯಿತು. ರಾಮೇಶ್ವರ ದೇವರ ಉತ್ಸವ ಮೂರ್ತಿಯನ್ನು ತೆಪ್ಪದಲ್ಲಿರಿಸಿ ಉತ್ಸವ ನೆರವೇರಿಸಲಾಯಿತು. ಇದೇ ವೇಳೆ ಬಾನಂಗಳದಲ್ಲಿ ಸಿಡಿಮದ್ದುಗಳ ಚಿತ್ತಾರ ತೆಪ್ಪೋತ್ಸವ ವೈಭವ ಹೆಚ್ಚಿಸಿತು. ನೆರೆದಿದ್ದ ಸಾವಿರಾರು ಜನರು ಕ್ಯಾಮರಾ, ಮೊಬೈಲ್‌ಗಳಲ್ಲಿ ತೆಪ್ಪೋತ್ಸವ, ಸಿಡಿಮದ್ದು ಪ್ರದರ್ಶನವನ್ನು ಸೆರೆ ಹಿಡಿದರು.
ತೂಗು ಸೇತುವೆ ಮತ್ತು ಹೊಳೆ ದಂಡೆ ಮೇಲೆ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಅಯೋಧ್ಯೆ ರಾಮ ಮಂದಿರ ಮಾದರಿ ಲೈಟಿಂಗ್ ವ್ಯವಸ್ಥೆ ಜನರ ಗಮನ ಸೆಳೆಯಿತು. ಶಾಸಕ ಆರಗ ಜ್ಞಾನೇಂದ್ರ, ತಹಶೀಲ್ದಾರ್ ಜಕ್ಕನಗೌಡರ್, ಡಿವೈಎಸ್‌ಪಿ ಗಜಾನನ ವಾಮನಾ ಸುತಾರ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಗೀತಾ ರಮೇಶ್, ಜಾತ್ರಾ ಸಮಿತಿ ಸಂಚಾಲಕ ಸೊಪ್ಪುಗುಡ್ಡೆ ರಾಘವೇಂದ್ರ, ಧರ್ಮೇಶ್ ಸಿರಿಬೈಲು, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕುರಿಯಾ ಕೋಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದನ್ನೂ ಓದಿ – ತೀರ್ಥಹಳ್ಳಿಯಲ್ಲಿ ರಾಮೇಶ್ವರ ದೇವರ ವೈಭವದ ರಥೋತ್ಸವ, ಇವತ್ತು ರಾತ್ರಿ ತೆಪ್ಪೋತ್ಸವ
ದಾಖಲೆ ಪ್ರಮಾಣದಲ್ಲಿ ಜನ ಸೇರಿದ್ದರಿಂದ ತೀರ್ಥಹಳ್ಳಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದರು. ವಿವಿಧೆಡೆ ಸಿಸಿಟಿವಿ ಕ್ಯಾಮರಾ, ಡ್ರೋಣ್ ಮೂಲಕ ಕಣ್ಗಾವಲು ಇರಿಸಿದ್ದರು.
ಫೋಟೊ ಆಲ್ಬಂ
ಫೋಟೊಗಳು : ಆದಿತ್ಯ ಪ್ರಸಾದ್, ರಾಯಲ್ ಕಾಫಿ, ನೆಹರು ರಸ್ತೆ, ಶಿವಮೊಗ್ಗ






LATEST NEWS
- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು






