ದೇವಸ್ಥಾನದಲ್ಲಿ ಕಳ್ಳತನ, 2 ಕೆ.ಜಿ ಬೆಳ್ಳಿ ವಸ್ತುಗಳನ್ನು ದೋಚಿದ ಖದೀಮರು, ಎಲ್ಲಿ? ಹೇಗಾಯ್ತು ಕೃತ್ಯ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ತೀರ್ಥಹಳ್ಳಿ: ತಾಲ್ಲೂಕಿನ ಅರಳಸುರುಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹುಲಿಸರದ ಶ್ರೀ ವನದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ.

ದೇವಸ್ಥಾನದ ಗರ್ಭಗುಡಿಯ ಬೀಗ ಒಡೆದು ಒಳನುಗ್ಗಿದ ಕಳ್ಳರು, ಶ್ರೀ ವನದುರ್ಗಾಪರಮೇಶ್ವರಿ ದೇವಿಯ ಬೆಳ್ಳಿಯ ಮುಖವಾಡ, ಮಾಂಗಲ್ಯ ಸರ ಸೇರಿ ಸುಮಾರು 2 ಕೆ.ಜಿಗೂ ಅಧಿಕ ತೂಕದ ಬೆಳ್ಳಿಯ ಪೂಜಾ ವಸ್ತುಗಳನ್ನು ದೋಚಿದ್ದಾರೆ. ಕಾಣಿಕೆ ಹುಂಡಿಯನ್ನು ಒಡೆದು ಹಣವನ್ನೂ ಸಹ ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಮಂಗಳವಾರ ಮತ್ತು ಶುಕ್ರವಾರ ಮಾತ್ರ ಈ ದೇವಸ್ಥಾನದಲ್ಲಿ ಪೂಜೆ ನಡೆಯುತ್ತದೆ. ಇದನ್ನು ಗಮನಿಸಿದ್ದ ಕಳ್ಳರು ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ಪ್ರತಿದಿನದಂತೆ ಬೆಳಿಗ್ಗೆ ಭಕ್ತರೊಬ್ಬರು ದೇವಸ್ಥಾನಕ್ಕೆ ದೇವರ ದರ್ಶನಕ್ಕೆ ಬಂದಾಗ ಈ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.

THIRTHAHALLI-NEWS-GRAPHICS-BY-SHIVAMOGGA-LIVE

ತೀರ್ಥಹಳ್ಳಿ ಪೊಲೀಸ್ ಇನ್ಸ್‌ಪೆಕ್ಟರ್ ಇಮ್ರಾನ್ ಬೇಗ್, ಅಪರಾಧ ಪತ್ತೆ ವಿಭಾಗದ ಸಬ್ ಇನ್ಸ್‌ಪೆಕ್ಟರ್ ಸುಷ್ಮಾ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.