ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 15 ಜೂನ್ 2020

ತೀರ್ಥಹಳ್ಳಿ ತಾಲೂಕಿನಲ್ಲಿ ಮೂರನೇ ಕರೋನ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಮತ್ತೊಂದು ಗ್ರಾಮವನ್ನು ಸೀಲ್ ಡೌನ್ ಮಾಡಲಾಗಿದೆ.
ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷದ ಯುವತಿ ನಾಲ್ಕು ದಿನದ ಹಿಂದೆ ಊರಿಗೆ ಮರಳಿದ್ದರು. ಕಫ ಮತ್ತು ಗಂಟಲು ನೋವು ಕಾಣಿಸಿಕೊಂಡ ಹಿನ್ನೆಲೆ, ಚಿಕಿತ್ಸೆಗಾಗಿ ಯುವತಿ ಜೆ.ಸಿ.ಆಸ್ಪತ್ರೆಗೆ ಹೋಗಿದ್ದರು. ಈ ವೇಳೆ ಗಂಟಲು ದ್ರವ ಪರೀಕ್ಷೆ ನಡೆಸಲಾಗಿತ್ತು.
ಕರೋನ ಪಾಸಿಟಿವ್, ಶುರುವಾಯ್ತು ಭೀತಿ
ಪರೀಕ್ಷೆ ಬಳಿಕ ಯುವತಿಯಲ್ಲಿ ಕರೋನ ಪಾಸಿಟಿವ್ ಬಂದಿದೆ. ಇದು ತಾಲೂಕಿನಲ್ಲಿ ಪುನಃ ಆತಂಕ ಸೃಷ್ಟಿಸಿದೆ. ಯುವತಿಯ ಮನೆಯಲ್ಲಿ ತಂದೆ, ತಾಯಿಯಷ್ಟೇ ಇದ್ದಾರೆ. ಹೊಸಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯುವತಿಯ ಊರಿದ್ದು, ಅದನ್ನು ಸೀಲ್ ಡೌನ್ ಮಾಡಲಾಗಿದೆ. ಆರು ಮನೆಗಳು ಈ ಗ್ರಾಮದಲ್ಲಿವೆ. ಯಾರೂ ಮನೆಯಿಂದ ಹೊರಬಾರದಂತೆ ಸೂಚಿಸಲಾಗಿದೆ.
ದೇವರ ಹರಕೆ ದಿನವೇ ಕ್ವಾರಂಟೈನ್
ಯುವತಿ ಮನೆಯಲ್ಲಿ ಭಾನುವಾರ ದೇವರ ಹರಕೆಯಿತ್ತು ಎಂದು ತಿಳಿದು ಬಂದಿದೆ. ಅದೇ ದಿನ ಕರೋನ ಪಾಸಟಿವ್ ಬಂದಿದ್ದು, ಯುವತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು, ದೇವರ ಹರಕೆಗೆ ನೆಂಟರು, ಇಷ್ಟರನ್ನು ಕರೆಯಲು ಯುವತಿಯ ತಂದೆ ಕೆಲವು ಕಡೆಗೆಲ್ಲ ಹೋಗಿ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200