ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 2 ಆಗಸ್ಟ್ 2019
ಬಂಟರ ಸಂಘದ ಮಹಿಳಾ ವಿಭಾಗದ ವತಿಯಿಂದ ತೀರ್ಥಹಳ್ಳಿಯಲ್ಲಿ ಆಷಾಢ ಮಾಸದ ಆಟಿಡು ಒಂಜಿ ದಿನ ಆಯೋಜಿಸಲಾಯಿತು. ಇದರ ಅಂಗವಾಗಿ, ವಿವಿಧ ಬಗೆಯ ಖಾದ್ಯಗಳನ್ನು ತಯಾರಿಸಿ ಒಟ್ಟಿಗೆ ಸವಿದು ಮಹಿಳೆಯರು ಸಂಭ್ರಮಿಸಿದರು.
ಪಟ್ಟಣದ ಬಂಟರ ಭವನದಲ್ಲಿ ಕಾರ್ಯಕ್ರಮ ಉದ್ಘಾಟಿಸಿದ ಬಂಟರ ಮಹಿಳಾ ವಿಭಾಗದ ಅಧ್ಯಕ್ಷೆ ಶಶಿಕಲಾ ಎಂ ಶೆಟ್ಟಿ, ನಮ್ಮ ಸಂಸ್ಕೃತಿಯಲ್ಲಿ ಆಷಾಢ ಮಾಸಕ್ಕೆ ವಿಶೇಷವಾದ ಮಹತ್ವವಿದೆ. ಧಾರ್ಮಿಕ, ಜಾನಪದ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಈ ಮಾಸದಲ್ಲಿ ನಡೆಯಲಿದ್ದು, ಆದರೆ ನಾವುಗಳಿಂದು ಆಟಿಡು ಒಂಜಿ ದಿನದ ಪದ್ಧತಿಯನ್ನು ಮರೆಯುತ್ತಿದ್ದೇವೆ ಎಂದರು.
ತಾಲ್ಲೂಕು ಬಂಟರ ಸಮಾಜದ ಅಧ್ಯಕ್ಷ ಬಿ.ಎಲ್. ಪ್ರಭಾಕರ್ ಹೆಗ್ಡೆ, ಮಹಿಳಾ ವಿಭಾಗದ ಉಪಾಧ್ಯಕ್ಷೆ ಸುಜಯ ಕೆ ಶೆಟ್ಟಿ, ಕಾರ್ಯದರ್ಶಿ ಚಂದ್ರಿಕಾ ಎಂ ಶೆಟ್ಟಿ, ಖಜಾಂಚಿ ನಯನ ಜಯಪ್ರಕಾಶ್ ಶೆಟ್ಟಿ, ಸದಸ್ಯರಾದ ಪ್ರೇಮಾ ಆರ್ ಶೆಟ್ಟಿ, ಜ್ಯೋತಿ ದಿಲೀಪ್, ಸಂಘದ ನಿರ್ದೇಶಕರಾದ ಚಂದ್ರವತಿ ಶೆಟ್ಟಿ, ಗೀತಾ ಸದಾನಂದ ಶೆಟ್ಟಿ ಹಾಗೂ ತಾಲ್ಲೂಕು ಬಂಟರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200