ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 JANUARY 2021
ತೀರ್ಥಹಳ್ಳಿಯ ಎಳ್ಳಮಾವಾಸ್ಯೆ ಜಾತ್ರೆ ವಿಜೃಂಭಣೆಯಿಂದ ನೆರವೇರಿತು. ಸಹಸ್ರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಭಕ್ತರು ದೇವರ ದರ್ಶನ ಪಡೆದು ಪುನೀತರಾದರು.
ಎಳ್ಳಮಾವಾಸ್ಯೆ ರಥೋತ್ಸವ ಮತ್ತು ಸಂಕ್ರಾಂತಿ ಹಬ್ಬ ಒಂದೇ ದಿನ ಬಂದಿದ್ದರಿಂದ, ಎರಡು ರಥೋತ್ಸವವನ್ನು ಒಟ್ಟಿಗೆ ನಡೆಸಲಾಯಿತು. ರಥೋತ್ಸವದ ವೇಳೆ ಅಡಕೆ ಹೊಸ ಫಸಲನ್ನು ರಥದತ್ತ ತೂರಿದರು. ರಥಕ್ಕೆ ತಾಗಿ ಕೆಳಗೆ ಬೀಳುತ್ತಿದ್ದ ಅಡಕೆ ಫಸಲನ್ನು ಪ್ರಸಾದದ ರೂಪದಲ್ಲಿ ಸ್ವೀಕರಿಸಿದರು.
ರಥೋತ್ಸವಕ್ಕೂ ಮೊದಲು ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಭಾರೀ ಸಂಖ್ಯೆಯ ಭಕ್ತರು ಸೇರಿದ್ದರು. ಈ ವೇಳೆ ಅಧಿವಾಸ ಹೋಮ, ಕಲಶಾಭಿಷೇಕ, ಮಹಾ ಪೂಜೆ ನೆರವೇರಿಸಲಾಯಿತು.
ಇವತ್ತು ತೆಪ್ಪೋತ್ಸವ
ಎಳ್ಳಮಾವಸ್ಯೆ ಜಾತ್ರೆ ಹಿನ್ನೆಲೆ ಇವತ್ತು ಬೆಳಗ್ಗೆಯಿಂದ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯಲಿವೆ. ರಾತ್ರಿ 7ಕ್ಕೆ ಸಾರ್ವಜನಿಕ ತೆಪ್ಪೋತ್ಸವ, ಸಂದಾನ, ಪೂರ್ಣಾಹುತಿ, ಧ್ವಜಾರೋಹಣ, ಪ್ರಸಾದ ವಿತರಣೆ ನಡೆಯಲಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






