ತೀರ್ಥಹಳ್ಳಿ: ತಾಲೂಕಿನ ಹೊಳೆಕೊಪ್ಪ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಕೆರೆಗೆ ನೀರು ತುಂಬಿಸುವ ಕಾಮಗಾರಿ ವೇಳೆ ಇಂಜಿನಿಯರ್ಗೆ (engineer) ಬೆದರಿಕೆ ಹಾಕಿ, ಹಣ ವಸೂಲಿ ಮಾಡಿದ ಘಟನೆ ನಡೆದಿದೆ. ಕಾಮಗಾರಿ ತಡೆಯುವುದಾಗಿ ಬೆದರಿಸಿ ₹20,000 ಫೋನ್ ಪೇ ಮೂಲಕ ವರ್ಗಾಯಿಸಿಕೊಳ್ಳಲಾಗಿದೆ.
ಬಸವಾನಿ ಗ್ರಾಮದ ಹೊಳೆಕೊಪ್ಪ ಎಂಬಲ್ಲಿ ಕೆರೆಗೆ ನೀರು ತುಂಬಿಸುವ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದೆ. ಮಾರ್ಚ್ 4ರಂದು ಕಾಮಗಾರಿ ಸ್ಥಳಕ್ಕೆ ಫಾರ್ಚುನರ್ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಅಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇಂಜಿನಿಯರ್ ಪ್ರವೀಣ್ಕುಮಾರ್ ಅವರ ಬಳಿ ಕಾಮಗಾರಿ ಬಗ್ಗೆ ತಗಾದೆ ತೆಗೆದಿದ್ದಾನೆ. ಅಲ್ಲದೆ ಗೂಗಲ್ ಪೇ ಮೂಲಕ ಎರಡು ಬಾರಿ ₹10,000 ಹಣ ವರ್ಗಾಯಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಗುತ್ತಿಗೆದಾರ ಮಹೇಶ ಎಂಬುವವರು ದೂರು ನೀಡಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ