ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | 02 ಏಪ್ರಿಲ್ 2019
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಚುನಾವಣೆ ಹೊಸ್ತಿಲಲ್ಲೇ ಶಿವಮೊಗ್ಗ ಜೆಡಿಎಸ್’ಗೆ ಶಾಕಿಂಗ್ ನ್ಯೂಸ್ ಸಿಕ್ಕಿದೆ. ತೀರ್ಥಹಳ್ಳಿ ಜೆಡಿಎಸ್’ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ತಾಲೂಕು ಅಧ್ಯಕ್ಷರೇ ರಾಜೀನಾಮೆ ನೀಡಿದ್ದಾರೆ. ಅಲ್ಲದೆ, ಚುನಾವಣೆಯಲ್ಲಿ ಮಧು ಬಂಗಾರಪ್ಪ ಪರ ಪ್ರಚಾರ ನಡೆಸದೆ ತಟಸ್ಥವಾಗಿ ಉಳಿಯುವುದಾಗಿ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯ ಮಾತನಾಡಿದ ತೀರ್ಥಹಳ್ಳಿ ಜೆಡಿಎಸ್ ಅಧ್ಯಕ್ಷ ಮದನ್, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದರು. ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರ ಸರ್ವಾಧಿಕಾರಿ ಧೋರಣೆಯಿಂದ ಬೇಸತ್ತು ರಾಜೀನಾಮೆ ನೀಡುತ್ತಿರುವುದಾಗಿ ಸ್ಪಷ್ಟಪಡಿಸಿದ ಮದನ್, ಲೋಕಸಭೆ ಚುನಾವಣೆ ಬಳಿಕ ಮುಂದಿನ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದರು. ಇನ್ನು, ಮದನ್ ಅವರೊಂದಿಗೆ ಅವರ ಬೆಂಬಲಿಗರು ಕೂಡ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಎಂದೂ ಕಡೆಗಣಿಸಿಲ್ಲ, ಅವರಿಗೆ ಒಳ್ಳೆಯದಾಗಲಿ
ನಂತರ ಸುದ್ದಿಗೋಷ್ಠಿ ನಡೆಸಿದ ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಪಕ್ಷದಲ್ಲಿ ಮದನ್ ಅವರನ್ನು ಎಂದೂ ಕಡೆಗಣಿಸಿಲ್ಲ. ನಮ್ಮಿಬ್ಬರ ನಡುವೆ ಯಾವುದೇ ಜಗಳವಾಗಿಲ್ಲ. ಸಣ್ಣಪುಟ್ಟ ಗೊಂದಲಗಳಿದ್ದರೆ ಬಗೆಹರಿಸಿಕೊಳ್ಳುತ್ತೇವೆ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರಬಹುದು, ಮಧು ಬಂಗಾರಪ್ಪ ವಿರುದ್ಧ ಪ್ರಚಾರ ನಡೆಸುವುದಿಲ್ಲ ಅಂತಾ ಮದನ್ ಹೇಳಿದ್ದಾರಲ್ಲ. ಅವರಿಗೆ ಒಳ್ಳೆಯದಾಗಲಿ ಎಂದರು.
ಮೂರು ದಿನದ ಹಿಂದಷ್ಟೇ ಸಚಿವ ಡಿ.ಕೆ.ಶಿವಕುಮಾರ್ ಅವರು ತೀರ್ಥಹಳ್ಳಿಗೆ ಭೇಟಿ ನೀಡಿದ್ದರು. ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದ್ದರು. ಅಲ್ಲದೇ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಆರ್.ಎಂ.ಮಂಜುನಾಥಗೌಡ ಅವರನ್ನು ಒಂದೇ ವೇದಿಕೆಯಲ್ಲಿ ಕೂರಿಸಿ, ಒಗ್ಗಟ್ಟು ಪ್ರದರ್ಶಿಸಿದ್ದರು. ಆದರೆ ಈಗ ತಾಲೂಕು ಜೆಡಿಎಸ್’ನಲ್ಲೇ ಭಿನ್ನಮತ ಸ್ಫೋಟಗೊಂಡಿರುವುದು, ಕಾರ್ಯಕರ್ತರಲ್ಲಿ ಗೊಂದಲವನ್ನುಂಟು ಮಾಡಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]