ಶಿವಮೊಗ್ಗ ಲೈವ್.ಕಾಂ | 4 ಜನವರಿ 2019
ಕಾಲು ಸಂಕ ನಿರ್ಮಾಣ, ಕೊಳೆರೋಗದಿಂದ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ, ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ಪರಿಹಾರದ ಹಣ ಬಿಡುಗಡೆಯಾಗಿದೆ. ಈ ಕುರಿತು ಶಾಸಕ ಆರಗ ಜ್ಞಾನೇಂದ್ರ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
34 ಕಲುಸಂಕ ಕಾಮಗಾರಿಗೆ ಅನುದಾನ
ತೀರ್ಥಹಳ್ಳಿಯಲ್ಲಿ ಕಾಲು ಸಂಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ 4.5 ಕೋಟಿ ರೂ. ಬಿಡುಗಡೆ ಮಾಡಿದೆ. 8 ರಿಂದ 25 ಲಕ್ಷ ರೂ.ವರೆಗಿನ 34 ಕಾಮಗಾರಿಗೆ ಇದನ್ನು ಬಳಸಲಾಗುತ್ತದೆ ಎಂದು ಶಾಸಕ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಕೊಳೆರೋಗ ಪರಿಹಾರ, ಕಾಲೇಜು ಅಭಿವೃದ್ಧಿಗೆ ಅನುದಾನ
ಇನ್ನು, ಕೊಳೆರೋಗದಿಂದ ನಷ್ಟಕ್ಕೀಡಾದ ಅಡಕೆ ಬೆಳೆಗಾರರಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರ 1.59 ಕೋಟಿ ರೂ. ಬಿಡುಗಡೆಯಾಗಿದೆ. ಪರಿಹಾರಕ್ಕೆ ಗ್ರಾಮ ಲೆಕ್ಕಿಗರ ಬಳಿ ರೈತರು ಅರ್ಜಿ ಸಲ್ಲಿಸಬೇಕಿದೆ. ಮತ್ತೊಂದೆಡೆ, ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಣ ವಿಸ್ತರಣೆ ಮತ್ತು ಪ್ರಯೋಗಾಲಯ ನಿರ್ಮಾಣಕ್ಕೆ ಸರ್ಕಾರ 7.10 ಕೋಟಿ ರೂ. ಅನುದಾನ ನೀಡಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
ಈ ಮೇಲ್ | [email protected]