ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 13 JANUARY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
THIRTHAHALLI : ಎಳ್ಳಮಾವಾಸ್ಯೆ ಜಾತ್ರೆ ಅಂಗವಾಗಿ ಪಟ್ಟಣದಲ್ಲಿ ಶ್ರೀ ರಾಮೇಶ್ವರ ದೇವರ ರಥೋತ್ಸವ ನಡೆಯಲಿದೆ. ದೊಡ್ಡ ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಜಾತ್ರೆ ಹಿನ್ನೆಲೆ ಬೆಳಗ್ಗೆಯಿಂದ ದೇವಸ್ಥಾನಕ್ಕೆ ಭಕ್ತರು ಆಗಮಿಸುತ್ತಿದ್ದರು. ಮಧ್ಯಾಹ್ನ ದೇವಸ್ಥಾನದ ರಥ ಬೀದಿಯಿಂದ ರಾಮಚಂದ್ರ ಮಠದವರೆಗೆ ರಥೋತ್ಸವ ನಡೆಯಿತು. ಪ್ರಧಾನ ಅರ್ಚಕ ಲಕ್ಷೀಶ್ ತಂತ್ರಿ, ರಾಜಶೇಖರ್ ಭಟ್ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ರಥೋತ್ಸವ ಆರಂಭವಾಗುತ್ತಿದ್ದಂತೆ ಭಕ್ತರು ಅಡಿಕೆ, ಭತ್ತ ಸೇರಿದಂತೆ ವರ್ಷದ ಹೊಸ ಫಸಲನ್ನು ರಥಕ್ಕೆ ಅರ್ಪಿಸಿದರು.
ತೀರ್ಥಹಳ್ಳಿ ಮತ್ತು ಸುತ್ತುಮುತ್ತಲ ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರಿಗೆ ಅನ್ನಸಂತರ್ಪಣೆ ಮಾಡಲಾಯಿತು. ಹೆಚ್ಚು ಜನ ಸೇರುವ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ವಿವಿಧೆಡೆ ಸಿಸಿಟಿವಿ, ಡ್ರೋಣ್ ಕ್ಯಾಮರಾಗಳನ್ನು ಬಳಸಿ ಪೊಲೀಸರು ನಿಗಾ ವಹಿಸಿದ್ದರು.
ಶಾಸಕ ಆರಗ ಜ್ಞಾನೇಂದ್ರ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಗೀತಾ ರಮೇಶ್, ಜಾತ್ರಾ ಸಮಿತಿ ಸಂಚಾಲಕ ಸೊಪ್ಪುಗುಡ್ಡೆ ರಾಘವೇಂದ್ರ, ತಹಶೀಲ್ದಾರ್ ಜಕ್ಕನ ಗೌಡರ್ ಉಪಸ್ಥಿತರಿದ್ದರು.
ಇಂದು ರಾತ್ರಿ ತೆಪ್ಪೋತ್ಸವ
ಜಾತ್ರೆಯ ಕೊನೆಯ ದಿನ ಜ.13ರಂದು ಸಂಜೆ 7ಕ್ಕೆ ತುಂಗಾ ನದಿಯಲ್ಲಿ ತೆಪ್ಪೋತ್ಸವ ನಡೆಯಲಿದೆ. ಈ ಹಿನ್ನೆಲೆ ತುಂಗಾ ನದಿಯ ತೂಗು ಸೇತುವೆ ಸೇರಿದಂತೆ ಸುತ್ತಮುತ್ತಲು ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಆಕರ್ಷಕ ಸಿಡಿಮದ್ದು ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ದೊಡ್ಡ ಸಂಖ್ಯೆಯ ಭಕ್ತರು ತುಂಗಾ ನದಿ ದಂಡೆಗೆ ಆಗಮಿಸಿ ತೆಪ್ಪೋತ್ಸವವನ್ನು ಕಣ್ತುಂಬಿಕೊಳ್ಳಲಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ವೈವಭದ ತೆಪ್ಪೋತ್ಸವ, ಕಣ್ತುಂಬಿಕೊಂಡ ಜನಸಾಗರ, ಇಲ್ಲಿದೆ 12 ಫೋಟೊಗಳು