ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ | 17 ಸೆಪ್ಟೆಂಬರ್ 2019
ತೀರ್ಥಹಳ್ಳಿ ತಾಲೂಕು ಕಚೇರಿಗೆ ಭೇಟಿ ನೀಡಲು ಅಧಿಕಾರಿಗಳು ಭಯ ಪಡ್ತಿದ್ದಾರೆ. ಜನರು ಹೆದರುತ್ತಿದ್ದಾರೆ. ಜನ ಪ್ರತಿನಿಧಿಗಳಿಗು ಢವಢವ ಶುರುವಾಗಿದೆ. ಇದಕ್ಕೆ ಕಾರಣ, ತಾಲೂಕು ಪಂಚಾಯಿತಿ ಕಟ್ಟಡದ ದುಸ್ಥಿತಿ.
ತಾಲೂಕು ಪಂಚಾಯಿತಿ ಕಟ್ಟಡದ ಒಂದು ಭಾಗ ಕುಸಿಯುವ ಭೀತಿ ಎದುರಾಗಿದೆ. ಅಡಕೆ ಮರಗಳ ತುಂಡುಗಳನ್ನು ಆಸರೆಗೆ ಇರಿಸಲಾಗಿದೆ. ಇದೆ ಕಾರಣಕ್ಕೆ ಜನರು, ಅಧಿಕಾರಿಗಳು, ಜನಪ್ರತಿನಿಧಿಗಳು ಇಲ್ಲಿ ಓಡಾಡಲು ಹೆದರುತ್ತಿದ್ದಾರೆ. ಈ ಕಟ್ಟಡದ ಕಾರಿಡಾರ್ ಮೂಲಕವೆ ತಾಲೂಕು ಪಂಚಾಯಿತಿ ಸಭಾಂಗಣಕ್ಕೆ ತೆರಳಬೇಕಿದೆ.
ಕೂಡಲೆ ಇದನ್ನು ದುರಸ್ಥಿ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಇಲ್ಲವಾದಲ್ಲಿ ಅಪಾಯ ಸಂಭವಿಸಬಹುದು ಎಂದು ಎಚ್ಚರಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200