ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | THIRTHAHALLI | 10 ಸೆಪ್ಟೆಂಬರ್ 2019
ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ಹೆಸರನ್ನು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ವಿನಾಕಾರಣ ಪ್ರಸ್ತಾಪಿಸುತ್ತಿದ್ದಾರೆ ಎಂದು ಯುವ ಕಾಂಗ್ರೆಸ್ ತಾಲೂಕು ಘಟಕ ಆಕ್ರೋಶ ವ್ಯಕ್ತಪಡಿಸಿದೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕೆಳಕೆರೆ, ಬಿಜೆಪಿ ಯುವ ಮೋರ್ಚಾದವರು ನಿರಂತರ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ಶ್ರೀ ರಾಮೇಶ್ವರ ದೇವಸ್ಥಾನದಲ್ಲಿನ ಕಳ್ಳತನ ಪ್ರಕರಣದ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಹಾಗಾಗಿ ಇದು ಪೊಲೀಸ್ ಇಲಾಖೆ ಮತ್ತು ನ್ಯಾಯಾಂಗ ವ್ಯವಸ್ಥೆಗೆ ಒಳಪಟ್ಟ ವಿಚಾರವಾಗಿದೆ. ಆದರೆ ತಮ್ಮ ನಾಯಕರನ್ನು ಮೆಚ್ಚಿಸಲು ಕಿಮ್ಮನೆ ರತ್ನಾಕರ್ ಅವರ ಹೆಸರನ್ನು ಪ್ರಸ್ತಾಪಿಸುತ್ತಿದ್ದಾರೆ ಎಂದು ಆರೋಪಿಸಿದರು.
ಈಗ ಸಿಬಿಐಗೆ ಪ್ರಕರಣ ವಹಿಸಬಹುದಲ್ಲಾ?
ಇನ್ನು, ಈ ಹಿಂದೆ ತೀರ್ಥಹಳ್ಳಿಯಲ್ಲಿ ನಡೆದ ಬಾಲಕಿ ನಂದಿತಾ ಸಾವು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿಯವರು ಒತ್ತಾಯಿಸಿದ್ದರು. ಈಗ ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರವೆ ಇದೆ. ಈಗೇಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುತ್ತಿಲ್ಲ.
ಯುವ ಕಾಂಗ್ರೆಸ್ ಪ್ರಮುಖರಾದ ಪೂರ್ಣೇಶ್ ಕೆಳಕೆರೆ, ಪಣಿರಾಜು, ಸುಭಾಷ್ ಕುಲಾಲ್, ಆದರ್ಶ ಹುಂಚದಕಟ್ಟೆ, ಸುಬ್ರಹ್ಮಣ್ಯ, ರಾಘವೇಂದ್ರ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422