ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಮೇ 2020
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತಲೆಮರೆಸಿಕೊಂಡಿರುವ ತೀರ್ಥಹಳ್ಳಿಯ ಯುವಕನೊಬ್ಬನ ಕುರಿತು ಸುಳಿವು ನೀಡಿದರೆ ಮೂರು ಲಕ್ಷ ರುಪಾಯಿ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಘೋಷಿಸಿದೆ. ಈ ಕುರಿತು ಎನ್‍ಐಎ ಪ್ರಕಟಣೆಯನ್ನು ಹೊರಡಿಸಿದೆ.
ಯಾರು ಆ ಯುವಕ? ಎಲ್ಲಿಯವನು?
ಅಬ್ದುಲ್ ಮತೀನ್ ಅಹ್ಮದ್ ತಾಹಾ (26), ಈತನ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಲು ನಿರ್ಧರಿಸಲಾಗಿದೆ. ಅಬ್ದುಲ್ ಮತೀನ್ ತಾಹಾ ತೀರ್ಥಹಳ್ಳಿ ತಾಲೂಕು ಸೊಪ್ಪುಗುಡ್ಡೆ ಗ್ರಾಮದ ಮೀನು ಮಾರ್ಕೆಟ್ ರಸ್ತೆಯ ನಿವಾಸಿ. ಕೆಲವು ತಿಂಗಳಿಂದ ಈತ ತಲೆಮರೆಸಿಕೊಂಡಿದ್ದಾನೆ.
ತಲೆ ಮರೆಸಿಕೊಂಡಿದ್ದೇಕೆ? ಬಹುಮಾನವೇಕೆ?
ಅಬ್ದುಲ್ ಮತೀನ್ ಉಗ್ರಗಾಮಿ ಚಟುವಟಿಕೆಯಲ್ಲಿ ತೊಡಗಿದ್ದಾನೆ ಎಂಬ ಆರೋಪವಿದೆ. ಈತನ ವಿರುದ್ಧ 2020ರ ಜನವರಿಯಲ್ಲಿ ಬೆಂಗಳೂರಿನ ಸದ್ದುಗುಂಟೆ ಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೆಂಗಳೂರಿನ ಗುರಪ್ಪನಪಾಳ್ಯದ ಮೆನಯೊಂದರಲ್ಲಿ ಐಎಸ್ಐಎಸ್ ಉಗ್ರಗಾಮಿ ಸಂಘಟನೆಯ ಸಭೆಗಳಲ್ಲಿ ಅಬ್ದುಲ್ ಮತೀನ್ ಪಾಲ್ಗೊಂಡಿದ್ದ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಉಗ್ರ ಚಟುವಟಿಕೆ ನಡೆಸುವುದು, ಸಿರಿಯಾ ಮತ್ತು ಅಫಘನಿಸ್ಥಾನ ದೇಶಗಳಿಗೆ ತೆರಳಿ ಐಎಸ್ಐಎಸ್ ಜೊತೆ ಸೇರುವ ಕುರಿತು ಈ ಸಭೆಗಳಲ್ಲಿ ಚರ್ಚೆ ನಡೆಸಿದ್ದರು. ಇನ್ನು, ತಮಿಳುನಾಡಿನಲ್ಲಿ ಹಿಂದೂ ಸಂಘಟನೆ ಮುಖಂಡರೊಬ್ಬರ ಹತ್ಯೆ ಪ್ರಕರಣದಲ್ಲೂ ಭಾಗಿಯಾದ ಆರೋಪವಿದೆ. ಇವೆರಡು ಪ್ರಕರಣ ಸಂಬಂಧ ಹಲವರನ್ನು ಬಂಧಿಸಲಾಗಿದೆ ಎಂದು ಎನ್‍ಐಎ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಆದರೆ ಅಬ್ದುಲ್ ಮತೀನ್ ತಲೆಮರೆಸಿಕೊಂಡಿದ್ದಾನೆ. ಇದೇ ಕಾರಣಕ್ಕೆ, ಈತನ ಕುರಿತು ಸುಳಿವು ನೀಡಿದವರಿಗೆ ಮೂರು ಲಕ್ಷ ರೂ ಬಹುಮಾನ ನೀಡುವುದಾಗಿ ಎನ್‍ಐಎ ತಿಳಿಸಿದೆ.
ತೀರ್ಥಹಳ್ಳಿಗೆ ಬಂದಿತ್ತು ತನಿಖಾ ತಂಡ
ಅಬ್ದುಲ್ ಮತೀನ್ ಪತ್ತೆ ಹೆಚ್ಚುವ ಸಲುವಾಗಿ ಜನವರಿ ತಿಂಗಳಲ್ಲಿ ಕೇಂದ್ರ ತನಿಖಾ ತಂಡ ಮತ್ತು ಬೆಂಗಳೂರು ಪೊಲೀಸರ ತಂಡವೊಂದು ತೀರ್ಥಹಳ್ಳಿ ತಾಲೂಕಿನ ಸೊಪ್ಪುಗುಡ್ಡೆ ಗ್ರಾಮಕ್ಕೆ ಆಗಮಿಸಿತ್ತು. ಇದು ತಾಲೂಕಿನಾದ್ಯಂತ ಆತಂಕ ಮೂಡಿಸಿತ್ತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]