ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 7 JULY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
THIRTHAHALLI : ಭಾರಿ ಮಳೆಗೆ ಹೆದ್ದಾರಿಗೆ (Highway) ಅಡ್ಡಲಾಗಿ ಮರ ಧರೆಗುರುಳಿ ವಾಹನ ಸಂಚಾರ ಸ್ಥಗಿತಗೊಂಡಿದೆ. ತೀರ್ಥಹಳ್ಳಿ ತಾಲೂಕು ಗಬಡಿ ಗ್ರಾಮದ ಬಳಿ ಘಟನೆ ಸಂಭವಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ರಾಷ್ಟ್ರೀಯ ಹೆದ್ದಾರಿ 169ಎ ನಲ್ಲಿ ಬೃಹತ್ ಮರ ಬುಡಮೇಲಾಗಿ ಬಿದ್ದಿದೆ. ಇದರಿಂದ ಶಿವಮೊಗ್ಗ – ತೀರ್ಥಹಳ್ಳಿ ಮಧ್ಯೆ ವಾಹನ ಸಂಚಾರ ಸ್ಥಗಿತಗೊಂಡಿದೆ. ಗಬಡಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡೂ ಬದಿಯಲ್ಲೂ ಒಂದು ಕಿ.ಮೀ.ಗು ಹೆಚ್ಚು ದೂರದವರೆಗೆ ವಾಹನ ದಟ್ಟಣೆ ಉಂಟಾಗಿದೆ.
ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಸ್ಥಳೀಯರು ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ತೀರ್ಥಹಳ್ಳಿ ಕಡೆಯಿಂದ ಶಿವಮೊಗ್ಗಕ್ಕೆ ತೆರಳುವ ವಾಹನಗಳು ಸೀಕೆ ರೋಡ್, ಕನ್ನಂಗಿ, ಹಣಗೆರೆ, ಆಯನೂರು ಮಾರ್ಗವಾಗಿ ಸಂಚರಿಸುತ್ತಿವೆ. ಆದರೆ ಶಿವಮೊಗ್ಗದಿಂದ ತೀರ್ಥಹಳ್ಳಿಗೆ ತೆರಳುತ್ತಿರುವ ವಾಹನಗಳು ಪರ್ಯಾಯ ಮಾರ್ಗವಿಲ್ಲದೆ ರಸ್ತೆಯಲ್ಲೆ ನಿಂತಿವೆ.
ಇದನ್ನೂ ಓದಿ – ಹೆಚ್ಚಾಗಲಿಲ್ಲ ಭದ್ರಾ ಜಲಾಶಯದ ಒಳ ಹರಿವು, ಅಚ್ಚುಕಟ್ಟು ಭಾಗದ ರೈತರಲ್ಲಿ ತಳಮಳ