ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ತೀರ್ಥಹಳ್ಳಿ: ಆಗುಂಬೆ ಘಾಟಿಯಲ್ಲಿ (Agumbe Ghat) ರಸ್ತೆಗೆ ಅಡ್ಡಲಾಗಿ ಮರ ಉರುಳಿದ್ದು, ಧರೆ ಕುಸಿತ ಉಂಟಾಗಿದೆ. ಇದರಿಂದ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ.
ಆಗುಂಬೆ ಘಾಟಿಯ 6ನೇ ತಿರುವಿನಲ್ಲಿ ಸಂಜೆ ವೇಳೆಗೆ ರಸ್ತೆಗೆ ಅಡ್ಡಲಾಗಿ ಮರ ಉರುಳಿದೆ. ಮರ ಮತ್ತು ಮಣ್ಣು ತೆರವಿಗೆ ಸಮಯ ಹಿಡಿಯಲಿದೆ. ಆದ್ದರಿಂದ ಇವತ್ತು ರಾತ್ರಿ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ.
ಗೂಡ್ಸ್ ವಾಹನದ ಮೇಲೆ ಮರ ಬಿದ್ದು ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಗಾಯಾಳುವನ್ನು ತೀರ್ಥಹಳ್ಳಿಯ ಆಸ್ಪತ್ರೆಗೆ ರವಾನಿಸಲಾಗಿದೆ.



ಇದನ್ನೂ ಓದಿ » ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿ, ಬೈಕ್‌ಗೆ ಡಿಕ್ಕಿ ಹೊಡೆದು ಗೂಡ್ಸ್ ವಾಹನ ಎಸ್ಕೇಪ್, ಚೇಸ್ ಮಾಡಿ ವಶಕ್ಕೆ ಪಡೆದ ಪೊಲೀಸ್

#news, #Agumbe Ghat, #road closure, #landslide, #traffic disruption, #fallen tree, #road safety, #accident, #Thirthahalli, #local news.

