ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | AGUMBE | 1 ಜೂನ್ 2022
ಮರ ಧರೆಗುರುಳಿ ಆಗುಂಬೆ ಘಾಟಿಯಲ್ಲಿ ಕೆಲಕಾಲ ವಾಹನ ಸಂಚಾರ ಬಂದ್ ಆಗಿತ್ತು. ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಮರ ತೆರವು ಮಾಡಿದ್ದಾರೆ.
ಆಗುಂಬೆ ಘಾಟಿಯ ಮೂರನೆ ತಿರುವಿನಲ್ಲಿ ಇವತ್ತು ಬೆಳಗ್ಗೆ ಮರವೊಂದು ಧರೆಗುರುಳಿತ್ತು. ಅದೃಷ್ಟವಶಾತ್ ಯಾವುದೆ ಅಪಾಯ ಸಂಭವಿಸಿಲ್ಲ.
ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದ್ದರಿಂದ ವಾಹನ ಸಂಚಾರ ವ್ಯತ್ಯಯ ಉಂಟಾಗಿತ್ತು. ಘಾಟಿಯಲ್ಲಿ ಕೆಲವು ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಅಡ್ಡಲಾಗಿ ಬಿದ್ದಿದ್ದ ಮರದ ಕೆಳಗೆ ಸ್ವಲ್ಪ ಜಾಗವಿದ್ದಿದ್ದರಿಂದ ಕಾರುಗಳು, ಬೈಕುಗಳು ಸಂಚರಿಸಿದವು.
ಪೊಲೀಸ್ ಇಲಾಖೆ ಸಿಬ್ಬಂದಿ ಮತ್ತು ಸ್ಥಳೀಯರು ಕಾರ್ಯಾಚರಣೆ ನಡೆಸಿ, ಮರವನ್ನು ಕತ್ತರಿಸಿದರು. ಆ ಬಳಿಕ ವಾಹನ ಸಂಚಾರ ಪುನಾರಂಭವಾಯಿತು.
ಇದನ್ನೂ ಓದಿ – ಶಿವಮೊಗ್ಗ ನಗರದ ವಿವಿಧೆಡೆ ಜೋರು ಮಳೆ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422