ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 15 ಜುಲೈ 2021
ಮರ ಬಡುಮೇಲಾಗಿ ರಸ್ತೆಗೆ ಬಿದ್ದು ಆಯನೂರಿನಿಂದ ಹಣಗೆರೆ ತೆರಳುವ ಮಾರ್ಗದಲ್ಲಿ ಸುಮಾರು ಮೂರು ಗಂಟೆ ರಸ್ತೆ ಸಂಚಾರ ವ್ಯತ್ಯಯವಾಗಿತ್ತು. ಅದೆ ಮಾರ್ಗವಾಗಿ ಬಂದ ಶಾಸಕ ಹರತಾಳು ಹಾಲಪ್ಪ ಅವರು ಮರ ತೆರವು ಮಾಡುವಂತೆ ಅಧಿಕಾರಿಗಳಿಗೆ ಕರೆ ಮಾಡಿದ ಬಳಿಕ, ರಸ್ತೆ ಸಂಚಾರಕ್ಕೆ ವ್ಯವಸ್ಥೆಯಾಗಿದೆ.
ಶಿವಮೊಗ್ಗ ಲೈವ್.ಕಾಂ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಶಿವಮೊಗ್ಗದಿಂದ ಹಣಗೆರೆ ಮಾರ್ಗವಾಗಿ ತೀರ್ಥಹಳ್ಳಿಗೆ ತೆರಳುವ ರಸ್ತೆಯಲ್ಲಿ ಮರ ಬುಡಮೇಲಾಗಿತ್ತು. ಸಿರಿಗೆರೆ ಗೇಟ್ ಸಮೀಪ ಘಟನೆ ಸಂಭವಿಸಿತ್ತು.
ಮೂರು ಗಂಟೆ ರಸ್ತೆ ಬ್ಲಾಕ್
ಮರ ಬಿದ್ದಿದ್ದರಿಂದ ಮೂರು ಗಂಟೆಗೂ ಹೆಚ್ಚು ಹೊತ್ತು ರಸ್ತೆ ಸಂಚಾರ ಸ್ಥಗಿತವಾಗಿತ್ತು. ನೂರಾರು ವಾಹನಗಳು ಎರಡು ಬದಿಯಲ್ಲೂ ನಿಂತಿದ್ದವು. ಮೊಬೈಲ್ ನೆಟ್‍ವರ್ಕ್ ಸರಿಯಾಗಿ ಸಿಗದ ಜಾಗವಾಗಿದ್ದರಿಂದ, ಮರ ತೆರವು ಮಾಡುವ ಕಾರ್ಯಾಚರಣೆಗೆಂದು ಅಧಿಕಾರಿಗಳಿಗೆ ಕರೆ ಮಾಡುವುದು ಕಷ್ಟವಾಗಿತ್ತು.
ಅದೇ ರಸ್ತೆಯಲ್ಲಿ ಬಂದರು ಎಂಎಲ್‍ಎ
ಇದೆ ಮಾರ್ಗವಾಗಿ ಬಂದ ಶಾಸಕ ಆರಗ ಜ್ಞಾನೇಂದ್ರ, ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಅಕ್ಕಪಕ್ಕದಲ್ಲಿ ಮರ ಕಟ್ ಮಾಡುವ ಯಂತ್ರಗಳಿರುವ ಸ್ಥಳೀಯರನ್ನು ಸ್ಥಳಕ್ಕೆ ಕರೆಯಿಸಿಕೊಂಡು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ತುಂಡು ಮಾಡಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಆಂಬುಲೆನ್ಸ್ ಸಂಚಾರ ಸರಾಗ
ಮರ ಕಟ್ ಮಾಡಿಸುತ್ತಿದ್ದಂತೆ ಅದೇ ಮಾರ್ಗಾವಾಗಿ ಬಂದ ಆಂಬುಲೆನ್ಸ್‍ಗಳು ಸರಾಗವಾಗಿ ಸಂಚರಿಸಿದವು. ಮಳೆಯ ನಡುವೆ ಮೂರು ಗಂಟೆಗೂ ಹೆಚ್ಚು ಹೊತ್ತು ರಸ್ತೆಯಲ್ಲಿ ನಿಂತಿದ್ದ ವಾಹನ ಸವಾರರು ಶಾಸಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200