ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ | 11 ಜುಲೈ 2019
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಬೆಜ್ಜವಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಇದ್ದ ಭಾರಿ ಗಾತ್ರದ ಅಕೇಶಿಯಾ ಮರ ಆಟೋರಿಕ್ಷಾ ಮೇಲೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಆಟೋ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ತೀರ್ಥಹಳ್ಳಿಯ ಸೊಪ್ಪುಗುಡ್ಡೆಯ ಸುಜಯ್ (45) ಗಾಯಗೊಂಡಿರುವ ಚಾಲಕ. ಮರ ಬಿದ್ದ ಪರಿಣಾಮ ಸುಜಯ್ ಅವರ ತಲೆಗೆ ಗಂಭೀರ ಗಾಯವಾಗಿದೆ. ಆಟೋ ರಿಕ್ಷ ನುಜ್ಜುಗುಜ್ಜಾಗಿದೆ. ಘಟನೆ ಬಳಿಕ ಅರಣ್ಯ ಇಲಾಖೆ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅರಣ್ಯ ಇಲಾಖೆ ವಿರುದ್ಧ ಆಕ್ರೋಶವೇಕೆ?
ಬೆಜ್ಜವಳ್ಳಿ ಗ್ರಾಮ ಪಂಚಾಯಿತಿ ಮುಂದೆ ರಸ್ತೆಗೆ ಬಾಗಿರುವ ಮರವನ್ನು ತೆರವು ಮಾಡಬೇಕು ಎಂದು ಸಾರ್ವಜನಿಕರು ಮತ್ತು ಗ್ರಾಮ ಪಂಚಾಯಿತಿಯಿಂದ ಅರಣ್ಯ ಇಲಾಖೆಗೆ ಮನವಿ ಮಾಡಲಾಗಿತ್ತು. ಆದರೆ ಈವೆರೆಗೂ ಅರಣ್ಯ ಇಲಾಖೆ ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳನ್ನು ತೆರವು ಮಾಡಲು ವಿಳಂಬ ಮಾಡಿದ್ದೇ ಘಟನೆಗೆ ಕಾರಣೆ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು.
ಇನ್ನು, ಘಟನೆ ವಿರುದ್ಧ ಶಾಸಕ ಆರಗ ಜ್ಞಾನೇಂದ್ರ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪ್ರಕರಣ ಸಂಬಂಧ ಸಂಬಂಧ ಅರಣ್ಯ ಇಲಾಖೆ ವಿರುದ್ಧ ಮೊಕದಮೆ ದಾಖಲಿಸಬೇಕು. ಗಾಯಗೊಂಡಿರುವ ಆಟೋ ಚಾಲಕನಿಗೆ ಅರಣ್ಯ ಇಲಾಖೆಯೇ ಚಿಕಿತ್ಸೆ ವೆಚ್ಚ ಭರಿಸಬೇಕು ಎಂದು ಆಗ್ರಹಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]