ಶಿವಮೊಗ್ಗ : ಭಾರಿ ಗಾಳಿ, ಮಳೆಗೆ ಹಣಗೆರೆಕಟ್ಟೆ ಸಮೀಪ ಮರಗಳು (Trees) ಧರೆಗುರುಳಿವೆ. ಇದರಿಂದ ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಇನ್ನು, ಈ ಮಾರ್ಗದಲ್ಲಿ ತೆರಳುತ್ತಿದ್ದ ಆಂಬುಲೆನ್ಸ್‌ಗಳು ಕೂಡ ಟ್ರಾಫಿಕ್‌ನಲ್ಲಿ ಸಿಲುಕಿದ್ದವು.
ಇದನ್ನೂ ಓದಿ » ಆಯನೂರು, ಕುಂಸಿ ಸುತ್ತಮುತ್ತ ಭಾರಿ ಮಳೆ, ಸಿಡಿಲಿಗೆ 40 ಕುರಿಗಳು ಸಾವು
ತೀರ್ಥಹಳ್ಳಿ ತಾಲೂಕಿನ ಹಣಗೆರೆ ಕಟ್ಟೆ ಸಮೀಪ ರಸ್ತೆಯಲ್ಲಿ ಮರಗಳು (Trees) , ಎರಡು ವಿದ್ಯುತ್ ಕಂಬಗಳು ಧರೆಗುರುಳಿವೆ. ಇದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಪೊಲೀಸರು, ಸಾರ್ವಜನಿಕರು ಮರಗಳನ್ನು ತೆರವು ಮಾಡಿ ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟರು.
ಇವತ್ತು ಮಧ್ಯಾಹ್ನ ಆಯನೂರು, ಕುಂಸಿ ಸುತ್ತಮುತ್ತ ಗಾಳಿ, ಗುಡುಗು ಸಹಿತ ಭಾರಿ ಮಳೆಯಾಗಿದೆ. ಇದರಿಂದಾಗಿ ಈ ಭಾಗದಲ್ಲಿ ಮರಗಳು ಧರೆಗುರುಳಿವೆ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200