ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 MAY 2023
THIRTHAHALLI : ನಿರ್ಮಾಣ ಹಂತದ ಸಮುದಾಯ ಭವನದಲ್ಲಿ (Community Hall) ಜೋಡಿ ಕೊಲೆ ನಡೆದಿದೆ. ಕಳೆದ ರಾತ್ರಿ ಕೃತ್ಯ ಎಸಗಿರುವ ಶಂಕೆ ಇದೆ.

ತೀರ್ಥಹಳ್ಳಿಯ ಕುರುವಳ್ಳಿ ಸಮೀಪ ನಿರ್ಮಾಣ ಹಂತದಲ್ಲಿರುವ ಸಮುದಾಯ ಭವನದಲ್ಲಿ (Community Hall) ಘಟನೆ ಸಂಭವಿಸಿದೆ. ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಲಾಗಿದೆ. ಮೃತರು ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಬಂದಿದ್ದ ಕೂಲಿ ಕಾರ್ಮಿಕರು ಎಂದು ಶಂಕಿಸಲಾಗಿದೆ. ಮೃತರನ್ನು ದಾವಣಗೆರೆ ಮೂಲದ ಮಂಜಪ್ಪ ಮತ್ತು ಬೀರಪ್ಪ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ – ಲಾರಿ ಚಾಲಕನ ತಲೆಗೆ ಕ್ರಿಕೆಟ್ ಬ್ಯಾಟ್ನಿಂದ ಹೊಡೆದ ಯುವಕರು, ಮೆಗ್ಗಾನ್ ಆಸ್ಪತ್ರೆಗೆ ದಾಖಲು
ವಿಷಯ ತಿಳಿದು ತೀರ್ಥಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆರಳಚ್ಚು, ಶ್ವಾನದಳ ಬರುವ ಸಾಧ್ಯತೆ ಇದೆ. ಹತ್ಯೆಗೆ ನಿಖರ ಕಾರಣ ಇನ್ನಷ್ಟೆ ಗೊತ್ತಾಗಬೇಕಿದೆ. ಸದ್ಯದಲ್ಲೇ ಸಮುದಾಯ ಭವನ ಉದ್ಘಾಟನೆ ಆಗುವುದರಲ್ಲಿತ್ತು.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
LATEST NEWS
- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

- ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ರಣ ಬಿಸಿಲು, ಇವತ್ತು ಎಷ್ಟಿರುತ್ತೆ ತಾಪಮಾನ?

- ಫೇಸ್ಬುಕ್ನಲ್ಲಿ ಮಹಿಳೆಯ ಖಾಸಗಿ ವಿಡಿಯೋ, ಹೊಸನಗರದ ಮಹಿಳೆ, ಬೆಂಗಳೂರಿನ ವ್ಯಕ್ತಿ ಅರೆಸ್ಟ್, ಯಾರಿವರು?

- ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

About The Editor
ನಿತಿನ್ ಆರ್.ಕೈದೊಟ್ಲು





