ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 18 JUNE 2023
THIRTHAHALLI : ತುಂಗಾ ನದಿಯಲ್ಲಿ (Tunga River) ಈಜಲು ತೆರಳಿದ್ದ ಇಬ್ಬರು ಉಪನ್ಯಾಸಕರು ನಾಪತ್ತೆಯಾಗಿದ್ದಾರೆ. ಈ ಪೈಕಿ ಒಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ತೀರ್ಥಹಳ್ಳಿ ತಾಲೂಕು ತೀರ್ಥ ಮತ್ತೂರು ಗ್ರಾಮದ ಬಳಿ ತುಂಗಾ ನದಿಯಲ್ಲಿ (Tunga River) ಘಟನೆ ಸಂಭವಿಸಿದೆ. ಕಾರ್ಕಳದ ನಿಟ್ಟೆ ಕಾಲೇಜಿನ ಉಪನ್ಯಾಸಕರಾದ ಪುನೀತ್ (38) ಮತ್ತು ಬಾಲಾಜಿ (36) ತುಂಗಾ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಇಬ್ಬರು ನಾಪತ್ತೆಯಾಗಿದ್ದು. ರಕ್ಷಣಾ ಕಾರ್ಯಾಚರಣೆ ವೇಳೆ ಒಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದ ಮನೆಯಲ್ಲಿ ಇಂಜಿನಿಯರ್ ಪತ್ನಿಯ ಮೃತದೇಹ, ಪೊಲೀಸ್, ವಿಧಿ ವಿಜ್ಞಾನ ಪ್ರಯೋಗಾಲಯ ತಂಡ ಸ್ಥಳಕ್ಕೆ ದೌಡು
ಉಪನ್ಯಾಸಕರು ತಮ್ಮ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದರು. ತೀರ್ಥಹಳ್ಳಿಯ ತೀರ್ಥಮತ್ತೂರು ಮಠದ ಸಮೀಪ ಇರುವ ಹೋಂ ಸ್ಟೇಯಲ್ಲಿ ತಂಗಿದ್ದರು. ತೀರ್ಥಹಳ್ಳಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು







