NEWS HIGHLIGHTS
ತೀರ್ಥಹಳ್ಳಿ: ನೀರು ಗಂಟಿಯೊಬ್ಬರ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸೊಪ್ಪುಗುಡ್ಡೆ ಗ್ರಾಮದಲ್ಲಿ ಸಾಲ್ವಡಿ ಗ್ರಾಮ ಪಂಚಾಯಿತಿಯ ನೀರುಗಂಟಿ ಸಂತೋಷ್ (39) ಮೃತರು.
ಕೆಲಸದ ಒತ್ತಡ ಹಾಗೂ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸಂತೋಷ್ ಅವರು ಅವಿವಾಹಿತರಾಗಿದ್ದು, ತಾಯಿ ಇದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
