ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 17 JUNE 2023
THIRTHAHALLI : ವಿದ್ಯಾರ್ಥಿ ಸಂಘಟನೆಯ ಮುಖಂಡನೊಬ್ಬ ಯುವತಿಯರ ಜೊತೆಗೆ ಸಲುಗೆಯಿಂದ ಇರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral) ಆಗಿದೆ. ಈ ಮಧ್ಯೆ ವಿದ್ಯಾರ್ಥಿ ನಾಯಕನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎನ್ಎಸ್ಯುಐ ಸಂಘಟನೆ ತೀರ್ಥಹಳ್ಳಿ ಪೊಲೀಸರಿಗೆ ಮನವಿ ಮಾಡಿದೆ.
ತೀರ್ಥಹಳ್ಳಿಯ ಕಾಲೇಜು ಒಂದರ ವಿದ್ಯಾರ್ಥಿಯಾಗಿರುವ ಈತ, ವಿದ್ಯಾರ್ಥಿ ಸಂಘಟನೆಯೊಂದರಲ್ಲಿ ತೊಡಗಿಸಿಕೊಂಡಿದ್ದ. ಕೆಲವು ಯುವತಿಯರ ಜೊತೆಗೆ ಈತ ಸಲುಗೆಯಿಂದ ಇರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral) ಆಗಿದೆ.
ಸ್ವಯಂ ಪ್ರೇರಿತ ತನಿಖೆಗೆ ಒತ್ತಾಯ
ಯುವತಿಯರ ವಿಡಿಯೋಗಳನ್ನು ವೈರಲ್ ಮಾಡಿರುವ ವಿದ್ಯಾರ್ಥಿ ಸಂಘಟನೆಯ ಮುಖಂಡನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತೀರ್ಥಹಳ್ಳಿಯ ಎನ್ಎಸ್ಯುಐ ಸಂಘಟನೆ ಕಾರ್ಯಕರ್ತರು ಡಿವೈಎಸ್ಪಿಗೆ ದೂರು ನೀಡಿದ್ದಾರೆ. ಸಂಘಟನೆಗೆ ಸದಸ್ಯತ್ವ ಪಡೆಯುವ ನೆಪದಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಆಮಿಷ ತೋರಿಸಿ, ವಿಡಿಯೋ ಮಾಡಿ ವೈರಲ್ ಮಾಡುವ ಬೆದರಿಕೆ ಒಡ್ಡಲಾಗಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಪೊಲೀಸರಿಂದ ನಟಿ ಬಂಧನ, ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ, ಏನಿದು ಕೇಸ್?
ಯಾವುದೆ ಪ್ರಭಾವಕ್ಕೆ ಒಳಗಾಗದೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿ ತನಿಖೆ ನಡೆಸಬೇಕು ಎಂದು ಎನ್ಎಸ್ಯುಐ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422