ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 08 ಏಪ್ರಿಲ್ 2019
ಮತದಾನ ಬಹಿಷ್ಕರಿಸುವುದಾಗಿ ಊರಿನ ಮುಂದೆ ಗ್ರಾಮಸ್ಥರು ಬ್ಯಾನರ್ ಕಟ್ಟಿದ್ದಾರೆ. ಊರಿನ ಜನರೆಲ್ಲ ಒಟ್ಟಿಗೆ ನಿಂತು, ಪ್ರತಿಭಟನೆ ನಡೆಸಿ ತೆಗೆಸಿಕೊಂಡಿರುವ ಫೋಟೊವನ್ನು ಬ್ಯಾನರ್’ನಲ್ಲಿ ಹಾಕಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತೀರ್ಥಹಳ್ಳಿ ತಾಲೂಕು ಮೇಲಿನಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗೆಬೈಲು ಗ್ರಾಮಸ್ಥರು ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಗ್ರಾಮದಲ್ಲಿ 500ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. ಆದರೆ ಹೆಗ್ಗೆಬೈಲು ಗ್ರಾಮಕ್ಕೆ ಸರಿಯಾದ ರಸ್ತೆಯೇ ಇಲ್ಲ. ಹಾಗಾಗಿ ಜನರು ಓಡಾಡುವುದೇ ಕಷ್ಟವಾಗಿದೆ. ಕಳೆದ ಚುನಾವಣೆ ಸಂದರ್ಭ, ಜನಪ್ರತಿನಿಧಿಗಳಿಗೆ ಈ ಕುರಿತು ತಿಳಿಸಿದ್ದರೂ, ಪ್ರಯೋಜವಾಗಿಲ್ಲ.
ರಸ್ತೆ ನಿರ್ಮಿಸುವಂತೆ ಗ್ರಾಮ ಪಂಚಾಯಿತಿಯಿಂದ ಜಿಲ್ಲಾಡಳಿತದವರೆಗೆ ಎಲ್ಲರಿಗೂ ಮನವಿ ಮಾಡಲಾಗಿದೆ. ಗ್ರಾಮವನ್ನು ಎಲ್ಲರೂ ನಿರ್ಲಕ್ಷಿಸಿದ್ದಾರೆ ಎಂದು ಊರುವರು ಆರೋಪಿಸಿದ್ದಾರೆ. ಇನ್ನು, ಮತದಾನ ಬಹಿಷ್ಕಾರದ ವಿಚಾರ ತಿಳಿಯುತ್ತಿದ್ದಂತೆ ತಹಶೀಲ್ದಾರ್ ಆನಂದಪ್ಪನಾಯಕ್ ಮತ್ತು ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಮನವೊಲಿಸುವ ಪ್ರಯತ್ನ ಮಾಡಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





