ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | 4 ಜನವರಿ 2019
ರಾಜ್ಯದಲ್ಲೇ ಮೊದಲ ಬಾರಿಗೆ ತೀರ್ಥಹಳ್ಳಿಯಲ್ಲಿ ನಿರಂತರ ಕುಡಿಯುವ ನೀರು ಪೂರೈಕೆ ಯೋಜನೆ ಜಾರಿಗೆ ಬಂದಿದೆ. ಯೋಜನೆಯನ್ನು ಇನ್ನಷ್ಟು ಸುಧಾರಣೆಗೊಳಿಸಿ ಪರಿಪೂರ್ಣವಾಗಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಸಂದೇಶ್ ಜವಳಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂದೇಶ್ ಜವಳಿ, ರಾಜ್ಯದಲ್ಲೇ ಮೊದಲ ಬಾರಿಗೆ ಈ ಯೋಜನೆ ಅನುಷ್ಠಾನಗೊಂಡಿದ್ದು, ಸಣ್ಣಪುಟ್ಟ ದೋಷವಿದ್ದು ಅದನ್ನು ಶೀಘ್ರವೇ ಪರಿಹರಿಸಲಾಗುತ್ತದೆ ಎಂದರು.
ತ್ಯಾಜ್ಯ ವಿಲೇವಾರಿ ಘಟಕಕ್ಕೆ ಹೊಸ ರೂಪ
ಆಧುನಿಕ ಯಂತ್ರೋಪಕರಣಗಳಿಂದ ಪಟ್ಟಣದ ಹೊರವಲಯದಲ್ಲಿರುವ ತ್ಯಾಜ್ಯ ವಿಲೇವಾರಿ ಘಟಕವನ್ನು ಸುಧಾರಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಸರ್ಕಾರ 1.10 ಕೋಟಿ ರೂ. ಅನುದಾನ ನೀಡಿದೆ. ಇಲ್ಲಿ ತ್ಯಾಜ್ಯವನ್ನು ಗೊಬ್ಬರವನ್ನಾಗಿಸಿ ಮಾರಾಟ ಮಾಡಬಹುದು ಎಂದು ತಿಳಿಸಿದರು.
ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಲಕ್ಷ್ಮೀದೇವಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥಶೆಟ್ಟಿ, ವೆಂಕಟೇಶ ಪಟವರ್ಧನ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
ಈ ಮೇಲ್ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422