ಶಿವಮೊಗ್ಗ ಲೈವ್
ತೀರ್ಥಹಳ್ಳಿ: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನೀರು ಸರಬರಾಜು ಕೇಂದ್ರದ ಜಾಕ್ ವೆಲ್ ಘಟಕದ ಹೂಳು ತೆಗೆಯುವ ಕಾಮಗಾರಿ ಹಿನ್ನೆಲೆ ನವೆಂಬರ್ 17 ಮತ್ತು 18 ರಂದು ತೀರ್ಥಹಳ್ಳಿ ಪಟ್ಟಣದಲ್ಲಿ ಕುಡಿಯುವ ನೀರು ಪೂರೈಕೆ ವ್ಯತ್ಯಾಯವಾಗಲಿದೆ ಎಂದು ತಿಳಿಸಲಾಗಿದೆ. (ಈ ಸುದ್ದಿಯನ್ನು ಇನ್ನು 23 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಜಾಕ್ ವೆಲ್ ಘಟಕದಲ್ಲಿ ಹೂಳು ತುಂಬಿಕೊಂಡಿರುವುದರಿಂದ ಸ್ವಚ್ಛತಾ ಕಾರ್ಯ ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಹಿನ್ನೆಲೆ ಎರಡು ದಿನಗಳ ಕಾಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನೀರು ಸರಬರಾಜು ಸ್ಥಗಿತಗೊಳ್ಳಲಿದೆ. ಸಾರ್ವಜನಿಕರು ಪಟ್ಟಣ ಪಂಚಾಯಿತಿಯೊಂದಿಗೆ ಸಹಕರಿಸಬೇಕು ಎಂದು ಮುಖ್ಯ ಅಧಿಕಾರಿ ನಾಗರಾಜ್ ಮನವಿ ಮಾಡಿದ್ದಾರೆ.
