ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 21 ಜೂನ್ 2021
ಕಾಡು ಹಂದಿ ದಾಳಿಗೆ ಮಹಿಳೆಯೊಬ್ಬರು ತೀವ್ರ ಗಾಯಗೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಬಂದ್ಯಾ ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ಲಲಿತಾ (39) ಕಾಡು ಹಂದಿ ದಾಳಿಗೆ ತುತ್ತಾದ ಮಹಿಳೆ. ಹುಲ್ಲು ಕೊಯ್ದುಕೊಂಡು ಬರಲು ಹೋದಾಗ ಘಟನೆ ಸಂಭವಿಸಿದೆ.
ಭಾನುವಾರ ಸಂಜೆ ಹಂದಿ ದಾಳಿ ಮಾಡಿದೆ. ಲಲಿತಾ ಅವರ ಗಂಟಲು ಭಾಗಕ್ಕೆ ತಿವಿದಿದ್ದರಿಂದ ತೀವ್ರ ರಕ್ತಸ್ರಾವ ಉಂಟಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.