ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಜನವರಿ 2022
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕೊರೋನ ಆತಂಕದ ನಡುವೆ ಶಿವಮೊಗ್ಗ ಜಿಲ್ಲೆಯಲ್ಲಿ ಕ್ಯಾಸನೂರು ಫಾರೆಸ್ಟ್ ಡಿಸೀಸ್ (ಕೆಎಫ್‌ಡಿ) ಭೀತಿ ಶುರುವಾಗಿದೆ. ಮಹಿಳೆಯೊಬ್ಬರಿಗೆ ಕೆಎಫ್‌ಡಿ ಫಾಸಿಟಿವ್ ಬಂದಿದೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ.
ತೀರ್ಥಹಳ್ಳಿ ತಾಲೂಕು ಮಾಳೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಕೆಎಫ್‌ಡಿ ವೈರಾಣು ಪತ್ತೆಯಾಗಿದೆ.
ಜ್ವರಕ್ಕೆ ಚಿಕಿತ್ಸೆ ಪಡೆಯಲು ಬಂದರು
ಸೋಂಕಿತ ಮಹಿಳೆ ಜ್ವರದ ಚಿಕಿತ್ಸೆಗಾಗಿ ತೀರ್ಥಹಳ್ಳಿಯ ಜಯ ಚಾಮರಾಜೇಂದ್ರ ಆಸ್ಪತ್ರೆಗೆ ಬಂದಿದ್ದರು. ಅವರ ಮಾದರಿ ಸಂಗ್ರಹ ಮಾಡಿ, ಕೆಎಫ್‌ಡಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಜೆ.ಸಿ.ಆಸ್ಪತ್ರೆಯಲ್ಲೇ ಮಹಿಳೆಗೆ ಚಿಕಿತ್ಸೆ ನೀಡಲಾಗುತ್ತಿದೆ.
‘ಮಹಿಳೆ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅವರ ಆರೋಗ್ಯ ಸುಧಾರಿಸುತ್ತಿದೆ. ಚಿಕಿತ್ಸೆ ಮುಂದುವರೆದಿದೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ ತಿಳಿಸಿದ್ದಾರೆ.
ವರ್ಷದ ಮೊದಲ ಪ್ರಕರಣ
ಶಿವಮೊಗ್ಗ ಜಿಲ್ಲೆಯಲ್ಲಿ ದಿನೇ ದಿನೇ ಕರೋನ ಸೋಂಕಿತರ ಪ್ರಕರಣ ಹೆಚ್ಚಳವಾಗುತ್ತಿದೆ. ಈ ಮಧ್ಯೆ 57 ವರ್ಷದ ಮಹಿಳೆಯೊಬ್ಬರಿಗೆ ಕೆಎಫ್‌ಡಿ ಪಾಸಿಟಿವ್ ಬಂದಿರುವುದು ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಆತಂಕಕ್ಕೆ ಕಾರಣವಾಗಿದೆ. ಇದು ಈ ವರ್ಷದ ಮೊದಲ ಪ್ರಕರಣವಾಗಿದ್ದು, ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.