ಶಿವಮೊಗ್ಗ: ಕ್ಯಾಸನೂರು ಫಾರೆಸ್ಟ್ ಡಿಸೀಸ್ (KFD) ಸೋಂಕಿತರೊಬ್ಬರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಕಟಗಾರು ಗ್ರಾಮದ 29 ವರ್ಷದ ಯುವಕ ಸೋಂಕಿನಿಂದಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ – ಶಿವಮೊಗ್ಗ ಸಮೀಪ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್ಸು, ಅದೃಷ್ಟವಶಾತ್ ಪ್ರಯಾಣಿಕರು ಪಾರು, ಆಗಿದ್ದೇನು?
ಯುವಕ ಜನವರಿ 20 ರಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು. ಸ್ಥಳೀಯವಾಗಿ ಚಿಕಿತ್ಸೆ ಪಡೆದರೂ ಜ್ವರದ ತೀವ್ರತೆ ಕಡಿಮೆಯಾಗಿರಲಿ. ಕಳೆದ ಭಾನುವಾರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಯುವಕ ಕೊನೆಯುಸಿರೆಳೆದಿದ್ದಾರೆ.
ಜಿಲ್ಲಾ ಆರೋಗ್ಯ ಇಲಾಖೆಯು ಈಗಾಗಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಕಟಗಾರು ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ಜ್ವರದ ಲಕ್ಷಣವಿರುವವರ ತಪಾಸಣೆಗೆ ಸೂಚಿಸಿದೆ. ಮಂಗಗಳು ಸತ್ತಿರುವುದು ಕಂಡುಬಂದಲ್ಲಿ ಕೂಡಲೇ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. (ಕೆಎಫ್‌ಡಿ ಸೋಂಕಿತರ ಹೆಸರು ಬಹಿರಂಗಪಡಿಸುವಂತಿಲ್ಲ)

LATEST NEWS
- ಶಿವಮೊಗ್ಗದಲ್ಲಿ ಹಾಲಿನ ಪ್ಯಾಕೆಟ್ ಕಳ್ಳರ ಹಾವಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

- KFD ಸೋಂಕಿಗೆ ಮೊದಲ ಬಲಿ, ತೀರ್ಥಹಳ್ಳಿಯ ಯುವಕ ಮಣಿಪಾಲದಲ್ಲಿ ಸಾವು

- ಶಿವಮೊಗ್ಗ ಸಮೀಪ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್ಸು, ಅದೃಷ್ಟವಶಾತ್ ಪ್ರಯಾಣಿಕರು ಪಾರು, ಆಗಿದ್ದೇನು?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 27 ಜನವರಿ 2026 | ಅಡಿಕೆ ಧಾರಣೆ

- ಶಿವಮೊಗ್ಗದ ವಸತಿ ಶಾಲೆಯ 17 ವಿದ್ಯಾರ್ಥಿನಿಯರು ಮೆಗ್ಗಾನ್ ಆಸ್ಪತ್ರೆಗೆ ದಾಖಲು, ಜಿಲ್ಲಾಧಿಕಾರಿ, ಸಿಇಒ ಭೇಟಿ

About The Editor
ನಿತಿನ್ ಆರ್.ಕೈದೊಟ್ಲು






