SHIVAMOGGA LIVE NEWS | 11 ಮಾರ್ಚ್ 2022
ತೀರ್ಥಹಳ್ಳಿ ತಾಲೂಕಿನಲ್ಲಿ ಮಂಗನ ಕಾಯಿಲೆ ಭೀತಿ ಮತ್ತಷ್ಟು ಹೆಚ್ಚಾಗಿದೆ. ಕನ್ನಂಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಯುವಕನಿಗೆ ಕೆಎಫ್’ಡಿ ಪಾಸಿಟಿವ್ ಬಂದಿದೆ.
ಕುಡುವಳ್ಳಿಯ 24 ವರ್ಷದ ಯುವಕನಿಗೆ ಸೋಂಕು ತಗುಲಿರುವುದು ದೃಢವಾಗಿದೆ. ಜ್ವರದಿಂದ ನರಳುತ್ತಿದ್ದ ಯುವಕನ ರಕ್ತವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. KFD ಸೋಂಕು ಇರುವುದು ದೃಢವಾಗಿದೆ. ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ | ತೀರ್ಥಹಳ್ಳಿಯಲ್ಲಿ ಇಬ್ಬರು ಮಹಿಳೆಯರಿಗೆ KFD ಪಾಸಿಟಿವ್, ಕನ್ನಂಗಿ ಭಾಗದಲ್ಲಿ ಆತಂಕ
ಈ ವರ್ಷ ಕನ್ನಂಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ KFD ಸೋಂಕು ಹೆಚ್ಚಾಗಿ ಕಾಣಿಸಿಕೊಂಡಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200