ಶಿವಮೊಗ್ಗ ಲೈವ್.ಕಾಂ | 18 ಮಾರ್ಚ್ 2019
ಪ್ರಧಾನಿ ನರೇಂದ್ರ ಮೋದಿ ಕುರಿತು ಚರ್ಚೆ ತಾರಕಕ್ಕೇರಿ, ಯುವಕರಿಬ್ಬರು ಹೊಡೆದಾಡಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಸಂಬಂಧ ಪರಸ್ಪರ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ. ತೀರ್ಥಹಳ್ಳಿಯಲ್ಲಿ ಘಟನೆ ನಡೆದಿದ್ದು, ಅಭಯ್ ಕಾಮತ್ ಮತ್ತು ರವೀಶ್ ಭಟ್ ನಡುವೆ ಗಲಾಟೆಯಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮೋದಿ ವಿಚಾರದಲ್ಲಿ ಜಗಳವೇಕೆ?
ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಚೌಕಿದಾರ್ ಕ್ಯಾಂಪೇನ್ ಕುರಿತು ಅಂಗಡಿಯೊಂದರಲ್ಲಿ ಚರ್ಚೆ ನಡೆಯುತ್ತಿತ್ತು. ಈ ವೇಳೆ ಅಭಯ್ ಕಾಮತ್ ಮತ್ತು ಮೋದಿ ಬೆಂಬಲಿಗ ರವೀಶ್ ಭಟ್ ನಡುವೆ ಮಾತಿಗೆ ಮಾತು ಬೆಳೆದು, ಬಡಿದಾಡಿಕೊಂಡಿದ್ದಾರೆ. ಇಬ್ಬರಿಗೂ ಗಾಯವಾಗಿದ್ದು, ತೀರ್ಥಹಳ್ಳಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]