ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 30 DECEMBER 2022
ಹೊಸನಗರ : ಕೃಷಿ ಪತ್ತಿನ ಸಹಕಾರ ಸಂಘದ ಬಾಗಿಲಿನ ಬೀಗ (theft at society) ಮುರಿದು ನಗದು, ದೇವರ ಬೆಳ್ಳಿ ವಿಗ್ರಹ, ಸಿಸಿಟಿವಿ ಡಿವಿಆರ್ ಕಳ್ಳತನ ಮಾಡಲಾಗಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಹೊಸನಗರ ತಾಲೂಕು ನಗರದ ನೀಲಕಂಠೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಬಾಗಿಲಿನ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಬೆಳಗ್ಗೆ ಸ್ವಚ್ಛತಾ ಕಾರ್ಯ ನಡೆಸಲು ಸಿಬ್ಬಂದಿ ಬಂದಾಗ ಕಳ್ಳತನ ಬೆಳಕಿಗೆ (theft at society) ಬಂದಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ – ಮದುವೆಯಾಗಿ ಏಳು ತಿಂಗಳು, ಗಂಡನ ಮನೆಯಲ್ಲಿ ಗೃಹಿಣಿ ನೇಣಿಗೆ ಶರಣು
ಡಿ.28ರಂದು ಸಂಜೆ ಸಂಘದ ಸೇಲ್ಸ್ ಮನ್ ಅವರು ಕಚೇರಿಯ ಬೀಗ ಹಾಕಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಕೀ ತಲುಪಿಸಿದ್ದರು. ಮರುದಿನ ಬೆಳಗ್ಗೆ ಸಂಘದ ಸ್ವಚ್ಛತೆ ಮಾಡುವ ಮಹಿಳೆ ಬಂದಾಗ ಬಾಗಿಲಿನ ಬೀಗ ಮುರಿದಿರುವುದು ಗೊತ್ತಾಗಿದೆ. ಕೂಡಲೆ ಸಿಬ್ಬಂದಿಗೆ ವಿಚಾರ ತಿಳಿಸಿದ್ದಾರೆ.
ಸಂಘದ ಕಚೇರಿಯಲ್ಲಿದ್ದ 25 ಸಾವಿರ ರೂ. ನಗದು, 3 ಸಾವಿರ ರೂ. ಮೌಲ್ಯದ ಬೆಳ್ಳಿಯ ಗಣಪತಿ ಮೂರ್ತಿ, 20 ಸಾವಿರ ರೂ. ಮೌಲ್ಯದ ಸಿಸಿಟಿವಿ ಕ್ಯಾಮರಾ ಡಿವಿಆರ್ ಕಳ್ಳತನ ಮಾಡಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.