SHIVAMOGGA LIVE NEWS | 9 ಮಾರ್ಚ್ 2022
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ನೀಡಿದ್ದ ಹೇಳಿಕೆ ಹಿನ್ನೆಲೆ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರಿಗೆ ಜೀವ ಬೆದರಿಕೆ ಒಡ್ಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಹರ್ಷ ಹತ್ಯೆ ಪ್ರಕರಣ ಸಂಬಂಧ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು. ಈ ಹಿನ್ನಲೆಯಲ್ಲಿ ಫೆ.21ರಂದು ಡಿ.ಎಸ್.ಅರುಣ್ ಅವರಿಗೆ ಬೆದರಿಕೆ ಕರೆ ಬಂದಿದೆ. ಮುಸ್ತಾಕ್ ಅಲಿ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಸಂದೇಶವನ್ನು ಪ್ರಕಟಿಸಿದ್ದಾನೆ ಎಂದು ಆರೋಪಿಸಲಾಗಿದೆ.
‘ನಿಮ್ಮ ತಲೆಲಿ ಇವತ್ತು ಕೇವಲ ಒಬ್ಬ ಹಿಂದೂ ಕಾರ್ಯಕರ್ತ ಸತ್ತಿದ್ದಾನೆ ಅಷ್ಟೆ. ಆದ್ರೆ ಮುಂದಿನ ದಿನ ನಿಮ್ಮ ಹೆಂಡಿರು ಮಕ್ಕಳೇ ನಮ್ಮ ಟಾರ್ಗೆಟ್ ನೆನಪಿಡಿ ಷಂಡ ಸರ್ಕಾರದ ಭಂಡರಂತೆ ವರ್ತಿಸುವ ಪ್ರಚಂಡರೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಒಡ್ಡಲಾಗಿದೆ.
ಇದನ್ನೂ ಓದಿ | ಹರ್ಷ ಹತ್ಯೆ ಕೇಸ್, 10 ಆರೋಪಿಗಳಿಗೆ ಮತ್ತೆ ನ್ಯಾಯಾಂಗ ಬಂಧನ
ಪ್ರಕರಣ ಸಂಬಂಧ ಡಿ.ಎಸ್.ಅರುಣ್ ಅವರ ಆಪ್ತ ಸಹಾಯಕ ವಾಗೀಶ್ ಅವರು ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ದೂರು ನೀಡಿದ್ದಾರೆ. ಅಲ್ಲದೆ ಭದ್ರತೆ ಒದಗಿಸುವಂತೆ ಮನವಿ ಮಾಡಿದ್ದಾರೆ. ಬೆದರಿಕೆ ಕುರಿತು ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರೆದಿದೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200