ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | 2 ಮೇ 2019
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಹೊಸನಗರವನ್ನು ಸಾಗರ ಮತ್ತು ತೀರ್ಥಹಳ್ಳಿ ವಿಧಾನಸಭೆ ಕ್ಷೇತ್ರಗಳಿಗೆ ಹಂಚಿಕೆ ಮಾಡಲಾಗಿದ್ದು, ತಾಲೂಕಿನಲ್ಲಿ ಅಭಿವೃದ್ಧಿ ಕುಂಟಿತವಾಗಿದೆ. ಆದ್ದರಿಂದ ಹೊಸನಗರವನ್ನು ಪ್ರತ್ಯೇಕ ವಿಧಾನಸಭೆ ಕ್ಷೇತ್ರ ಎಂದು ಘೋಷಣೆ ಮಾಡಬೇಕು ಅಂತಾ ಜನಜಾಗೃತಿ ಹೋರಾಟ ಸಮಿತಿ ಅಧ್ಯಕ್ಷ ಟಿ.ಆರ್.ಕೃಷ್ಣಪ್ಪ ಒತ್ತಾಯಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ರಿಪ್ಪನ್’ಪೇಟೆಯ ವಿನಾಯಕ ಸರ್ಕಲ್ ಬಸ್ ಸ್ಟಾಪ್’ನಲ್ಲಿ, ಕಾರ್ಮಿಕರ ದಿನಾಚರಣೆ ಅಂಗವಾಗಿ ಬಹಿರಂಗ ಸಭೆ ನಡೆಸಿದ ಟಿ.ಆರ್.ಕೃಷ್ಣಪ್ಪ, ರಾಜ್ಯಕ್ಕೆ ಬೆಳಕು ನೀಡಬೇಕು ಎಂದು ಮನೆ, ಮಠ ಕಳೆದುಕೊಂಡವರೇ ಹೆಚ್ಚಿದ್ದಾರೆ. ತಾಲೂಕಿನಲ್ಲಿ ಬಹುತೇಕರು ರೈತರೇ ಇದ್ದಾರೆ. ಸ್ವಾತಂತ್ರ್ಯ ಬಂದು ಏಳು ದಶಕವಾಗಿದ್ದರೂ, ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಯಾಗಿಲ್ಲ. ಆದ್ದರಿಂದ, ಹೊಸನಗರವನ್ನು ವಿಧಾನಸಭೆ ಕ್ಷೇತ್ರವನ್ನಾಗಿ ಘೋಷಣೆ ಮಾಡಬೇಕು ಎಂದು ಸ್ಪಷ್ಟಪಡಿಸಿದರು.
ಹೊಸನಗರ ತಾಲೂಕಿನಲ್ಲಿ ಜನಸಂಖ್ಯೆ ಕಡಿಮೆ ಇತ್ತು. ಹಾಗಾಗಿ ಶಿವಮೊಗ್ಗದ ಕೆಲವು ಗ್ರಾಮಗಳನ್ನು ಸೇರಿಸಿ, ಹೊಸನಗರ ವಿಧಾನಸಭೆ ಕ್ಷೇತ್ರವನ್ನಾಗಿ ಘೊಷಣೆ ಮಾಡಲಾಗಿತ್ತು. ಶಿರ್ನಾಳಿ ಚಂದ್ರಶೇಖರ್, ಬಿ.ಸ್ವಾಮಿರಾವ್, ಆಯನೂರು ಮಂಜುನಾಥ್, ಡಾ.ಜಿ.ಡಿ.ನಾರಾಯಣಪ್ಪ, ಹರತಾಳು ಹಾಲಪ್ಪ, ಬೇಳೂರು ಗೋಪಾಲಕೃಷ್ಣ, ಕಾಗೋಡು ತಿಮ್ಮಪ್ಪ ಅವರು ಇಲ್ಲಿಂದ ಆಯ್ಕೆಯಾಗಿದ್ದರು. ಆದರೆ ಕ್ಷೇತ್ರದ ಅಭಿವೃದ್ದಿ ಆಗಿಲ್ಲ. ನಾರಾಯಣಪ್ಪ, ಹರತಾಳು ಹಾಲಪ್ಪ, ಬೇಳೂರು ಗೋಪಾಲಕೃಷ್ಣ, ಕಾಗೋಡು ತಿಮ್ಮಪ್ಪ ಅವರು ಇಲ್ಲಿಂದ ಆಯ್ಕೆಯಾಗಿದ್ದರು. ಆದರೆ ಕ್ಷೇತ್ರದ ಅಭಿವೃದ್ದಿ ಆಗಿಲ್ಲ. ಹೀಗಿದ್ದೂ, ತಾಲೂಕನ್ನು ತೀರ್ಥಹಳ್ಳಿ ಮತ್ತು ಸಾಗರ ವಿಧಾಸನಭೆ ಕ್ಷೇತ್ರಗಳಿಗೆ ಹಂಚಿಕೆ ಮಾಡಿರುವುದರಿಂದ ಅಭಿವೃದ್ಧಿ ಮತ್ತಷ್ಟು ಮರೀಚಿಕೆಯಾಗಿದೆ ಎಂದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]