ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಆಗಸ್ಟ್ 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಸೊರಬ ತಾಲೂಕಿನ ವ್ಯಾಪ್ತಿಯಲ್ಲಿ ಮಳೆ ಬೀಳುತ್ತಿರುವ ಸಂದರ್ಭ ಮತ್ತು ಮಳೆ ಬಿದ್ದ ನಂತರದ ಎರಡು ದಿನ ಭಾರಿ ವಾಹನಗಳ ಮೂಲಕ ಮರ, ನಾಟಾ ಸಾಗಣೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಆಗಸ್ಟ್ 16ರಿಂದ ಅಕ್ಟೋಬರ್ 31ರವರೆಗೆ ಈ ನಿರ್ಬಂಧವಿರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಸಾಗರ ಅರಣ್ಯ ವಿಭಾಗದ ಸೊರಬ ತಾಲೂಕು ವ್ಯಾಪ್ತಿಗೆ ಸಂಬಂಧಿಸಿದಂತೆ ಹಿಡುವಳಿ, ಖಾಸಗಿ, ಖಾನೇಷುಮಾರಿ ಜಮೀನಿನ ಪ್ರದೇಶದಲ್ಲಿರುವ ಮರಗಳನ್ನು ಮಾಫಿಪಾಸ್ ಮೂಲಕ ಕಡಿತಲೆ ಮಾಡಿ ಸಾಗಾಣಿಕೆ ಮಾಡುವುದನ್ನು ತಾತ್ಕಾಲಿಕ ಅವಧಿಗೆ ನಿರ್ಬಂಧಿಸಲಾಗಿದೆ.
ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮರಗಳನ್ನು ಮಾಫಿಪಾಸ್ ಮೂಲಕ ಕಡಿತಲೆ ಮಾಡಿ ಸಾಗಾಣಿಕೆ ಮಾಡಲಾಗುತ್ತಿದೆ. ಈ ಜಿಲ್ಲೆಯು ವ್ಯಾಪಕವಾಗಿ ಮಳೆ ತರುವ ಮಲೆನಾಡು ಪ್ರದೇಶವಾಗಿದೆ. ಈ ಪ್ರದೇಶದಲ್ಲಿ ಮರಗಳ ಉತ್ಪನ್ನಗಳನ್ನು ಭಾರೀ ವಾಹನಗಳ ಮೂಲಕ ಸಾಗಾಣಿಕೆ ಮಾಡುತ್ತಿರುವುದರಿಂದ ರಸ್ತೆ ಕುಸಿಯುವುದನ್ನು ತಡೆಗಟ್ಟಲು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ, ಜೀವಹಾನಿಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200