ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜುಲೈ 2020
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಕರೋನ ಸೋಂಕು ತಡೆಗೆ ಬೆಂಗಳೂರು ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ದೊಡ್ಡ ಸಂಖ್ಯೆಯ ಜನರು, ಬೆಂಗಳೂರನಿಂದ ಶಿವಮೊಗ್ಗಕ್ಕೆ ಬರುತ್ತಿದ್ದಾರೆ. ಹೀಗೆ, ಜಿಲ್ಲೆಯೊಳಗೆ ಬರುತ್ತಿರುವ ತಪಾಸಣೆ ನಡೆಸಲು ಜಿಲ್ಲಾಡಳಿತ ನಿರ್ಧರಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಎರಡು ಕಡೆ ಚಿಕ್ ಪೋಸ್ಟ್ ಸ್ಥಾಪನೆ
ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುವ ಎರಡು ಮಾರ್ಗದಲ್ಲೂ ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ. ಬೆಂಗಳೂರಿನಿಂದ ತರಿಕೆರೆ ಮಾರ್ಗವಾಗಿ ಬರುವವರ ತಪಾಸಣೆಗೆ, ಭದ್ರಾವತಿಯ ಕಾರೆಹಳ್ಳಿಯಲ್ಲಿ ಚೆಕ್ಪೋಸ್ಟ್ ಸ್ಥಾಪಿಸಲಾಗಿದೆ. ಇನ್ನು ಚಿತ್ರದುರ್ಗ, ದಾವಣಗೆರೆ ಮೂಲಕ ಶಿವಮೊಗ್ಗ ಜಿಲ್ಲೆಯೊಳಗೆ ಬರುವವರ ತಪಾಸಣೆಗಾಗಿ ಹೊಳೆಹೊನ್ನೂರು ಪೊಲೀಸ್ ಠಾಣೆಯ ವ್ಯಾಪ್ತಿಯ ಹಂಚಿನ ಸಿದ್ದಾಪುರದಲ್ಲಿ ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ.
ಚೆಕ್ಪೋಸ್ಟ್ನಲ್ಲಿ ಪೊಲೀಸ್, ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜಿಲ್ಲೆಯೊಳಗೆ ಬರುವ ಪ್ರತಿ ವಾಹನವನ್ನು ತಡೆದು ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿದೆ. ಇನ್ನು, ಆರೋಗ್ಯ ತಪಾಸಣೆ ಮಾಡುವ ಆರೋಗ್ಯ ಇಲಾಖೆ ಸಿಬ್ಬಂದಿಗೆ ಪಿಪಿಇ ಕಿಟ್ ನೀಡಲಾಗಿದೆ.
ತಪಾಸಣೆ, ಮಾಹಿತಿ ಸಂಗ್ರಹ
ಬೆಂಗಳೂರಿನಿಂದ ಆಗಮಿಸುವವರ ತಪಾಸಣೆ ನಡೆಸಿ ಮಾಹಿತಿ ಸಂಗ್ರಹಿಸಲು ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]