ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 13 SEPTEMBER 2023
SHIMOGA : ಚಲಿಸುತ್ತಿದ್ದ ಕಾರಿಗೆ (Car) ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದಿದ್ದು, ಇದನ್ನು ಪ್ರಶ್ನಿಸಿದ ವ್ಯಕ್ತಿ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದ ಎನ್.ಟಿ.ರಸ್ತೆಯ ಮಂಡ್ಲಿ ಸಮೀಪ ಘಟನೆ ಸಂಭವಿಸಿದೆ. ನ್ಯಾಮತಿಯ ಸುಂದರೇಶ್ ಎಂಬುವವರು ತಮ್ಮ ಸಹೋದರಿ ಮನೆಯಿಂದ ಕಾರಿನಲ್ಲಿ ತೆರಳುತ್ತಿದ್ದರು. ಎನ್.ಟಿ.ರಸ್ತೆಯಲ್ಲಿ ಕಾರು ಚಲಾಯಿಸುತ್ತಿದ್ದಾಗ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಕಾರಿನಿಂದ ಇಳಿದ ಸುಂದರೇಶ್ ಡಿಕ್ಕಿ ಹೊಡೆದು ಕಾರಿನ ಚಾಲಕನನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಸುಂದರೇಶ್ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಲಾಗಿದೆ ಎಂದು ದೂರಿನಲ್ಲಿ ಆಪಾದಿಸಲಾಗಿದೆ.
ಘಟನೆ ಸಂಬಂಧ ನವೀನ್ ಎಂಬುವವರ ವಿರುದ್ಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ಇವತ್ತಿನ TOP 15 NEWS | ಓದಲು ಇಲ್ಲಿ ಕ್ಲಿಕ್ ಮಾಡಿ
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






