ಹೆದ್ದಾರಿಯಲ್ಲಿ ಮೂವರಿಗೆ ಅಪ್ಪಳಿಸಿ, ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 JANUARY 2024

SAGARA : ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಂತಿದ್ದ ಮೂವರಿಗೆ ಡಿಕ್ಕಿ ಹೊಡೆದಿದೆ. ಬಳಿಕ ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿದೆ. ಸಾಗರ ತಾಲೂಕು ಹೊಸೂರು ಗ್ರಾಮದಲ್ಲಿ ಘಟನೆ ಸಂಭವಿಸಿದೆ.

ಶಿವಮೊಗ್ಗದಿಂದ ಶಿರಸಿಗೆ ತೆರಳುತ್ತಿದ್ದ ಕಾರು ಹೊಸೂರು ಬಳಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ರಸ್ತೆ ಬದಿ ನಿಂತಿದ್ದ ಮೂವರು ಗ್ರಾಮಸ್ಥರಿಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮತ್ತೊಬ್ಬರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ – ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಲು ದಿನಾಂಕ ಪ್ರಕಟ, ಆನ್‌ ಆಫ್‌ ಮಾದರಿ ಪಾಲನೆಗೆ ನಿರ್ಧಾರ

ವೇಗವಾಗಿದ್ದ ಕಾರು ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಂಬ ಮುರಿದು ಕಾರಿನ ಮೇಲೆ ಬಿದ್ದಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಆನಂದಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.   

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment