ಶಿವಮೊಗ್ಗದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 30 DECEMBER 2022

ಶಿವಮೊಗ್ಗ : ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಸಂಬಂಧ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಅವರ ವಿರುದ್ಧ ದೂರು (case filed) ನೀಡಲಾಗಿದೆ. ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.

Shimoga Nanjappa Hospital

ಶಿವಮೊಗ್ಗದ ಎನ್.ಇ.ಎಸ್ ಮೈದಾನದಲ್ಲಿ ನಡೆದ ಹಿಂದೂ ಜಾಗರಣ ವೇದಿಕೆಯ ತ್ರೈ ವಾರ್ಷಿಕ ಪ್ರಾಂತ ಸಮ್ಮೇಳನದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್ ಅವರು ದಿಕ್ಸೂಚಿ ಭಾಷಣ ಮಾಡಿದ್ದರು. ಇದರಲ್ಲಿ ಪ್ರಚೋದನಕಾರಿ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರು ದೂರು (case filed) ನೀಡಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಾಧ್ವಿ ಗುಡುಗು, ಸಮ್ಮೇಳನದಲ್ಲಿ ಪ್ರಜ್ಞಾ ಸಿಂಗ್ ಭಾಷಣದ ಟಾಪ್ 12 ಪಾಯಿಂಟ್

ಪ್ರತಿ ಮನೆಯಲ್ಲಿಯು ಶಸ್ತ್ರಗಳನ್ನು ಇಟ್ಟುಕೊಳ್ಳಬೇಕು. ತರಿಕಾರಿ ಕೊಯ್ಯುವ ಚಾಕುವನ್ನು ಹರಿತವಾಗಿ ಇಟ್ಟುಕೊಳ್ಳಬೇಕು ಎಂದು ಸೇರಿದಂತೆ ಪ್ರಚೋದನೆ ನೀಡುವ ಅಂಶಗಳು ಭಾಷಣದಲ್ಲಿವೆ. ಪ್ರಚೋದನಕಾರಿಯಾಗಿ ಭಾಷಣ ಮಾಡಿದ ಸಾಧ್ವಿ ಪ್ರಜ್ಞಾ ಸಿಂಗ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೆಚ್.ಎಸ್.ಸುಂದರೇಶ್ ದೂರಿನಲ್ಲಿ ತಿಳಿಸಿದ್ದಾರೆ.

Shimoga Nanjappa HOspital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 30, 2022

Leave a Comment