‘ಶಿವಮೊಗ್ಗದಲ್ಲಿ ಕೋಟಿ ಕೋಟಿ ಹಗರಣ, ಈಗ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’, ಸಿಬಿಐ ತನಿಖೆಗೆ ಆಗ್ರಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್‌.ಕಾಂ | SHIMOGA NEWS | 4 ಜನವರಿ 2022

ಹಳ್ಳಿ ಹಳ್ಳಿಗೆ ವಿದ್ಯುತ್ ಪೂರೈಕೆ ಮಾಡುವ ನಿರಂತರ ಜ್ಯೋತಿ ಯೋಜನೆಯಲ್ಲಿ ಕೋಟಿ ಕೋಟಿ ರೂ. ಅವ್ಯವಹಾರ ನಡೆದಿದೆ. ಇದನ್ನು ಸಿಬಿಐಗೆ ವಹಿಸಬೇಕು ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಆಗ್ರಹಿಸಿದ್ದಾರೆ.

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಅವರು, ಜಿಲ್ಲೆಯಲ್ಲಿ 693 ಗ್ರಾಮಗಳಿವೆ. 24 ಗಂಟೆ ವಿದ್ಯುತ್ ಪೂರೈಕೆ ಮಾಡಲು ನಿರಂತರ ಜ್ಯೋತಿ ಯೋಜನೆಗೆ 240 ಕೋಟಿ ಕೊಡಲಾಗಿದೆ. 110 ಕೋಟಿಯನ್ನು ಗುತ್ತಿಗೆದಾರರಿಗೆ ಪಾವತಿ ಮಾಡಲಾಗಿದೆ. ಇದರಲ್ಲಿ ಅವ್ಯವಹಾರವಾಗಿದೆ ಅಂತಾ ಮೊದಲೆ ತಿಳಿಸಿದ್ದೆವು ಎಂದರು.

ಸರಿ ಮಾಡಿಕೊಳ್ಳಿ ಅಂತಾ ಸಚಿವರೆ ಹೇಳಿದರು

ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳ ಸಭೆ ಕೆರೆದು ಐದು ಕೋಟಿ ರೂ. ಹೆಚ್ಚು ಪಾವತಿಯಾಗಿದೆ. ಅದನ್ನು ಸರಿ ಮಾಡಿಕೊಳ್ಳಬೇಕು ಎಂದು ಎಂಟು ತಿಂಗಳ ಹಿಂದೆ ಸಭೆಯಲ್ಲಿ ಹೇಳಿದ್ದರು. ಮತ್ತೊಂದು ಸಭೆ ಮಾಡಿ 12.29 ಕೋಟಿ ರೂ. ಅವ್ಯವಹಾರ ನಡೆದಿದೆ ಸರಿ ಮಾಡಿಕೊಳ್ಳಿ ಎಂದು ಜಿಲ್ಲಾ ಸಚಿವರು ಹೇಳುವ ಮೂಲಕ ಅವ್ಯವಹಾರ ಆಗಿದೆ ಅನ್ನುವುದನ್ನು ಸಾಬೀತಾದಂತಾಗಿದೆ ಎಂದರು.

ನಿರಂತರ ಜ್ಯೋತಿ ಯೋಜನೆಯಲ್ಲಿ 89 ಸಾವಿರ ವಿದ್ಯುತ್ ಕಂಬಗಳನ್ನು ಸರಿಯಾಗಿ ಅಳವಡಿಸಿಲ್ಲ ಎಂದು ಇಂಧನ ಸಚಿವರು ಶಿವಮೊಗ್ಗ ಭೇಟಿ ವೇಳೆ ಹೇಳಿದ್ದಾರೆ. ವಾಸ್ತವದಲ್ಲಿ ಈ ಯೋಜನೆ ಸುಮಾರು 40 ರಿಂದ 50 ಕೋಟಿ ರೂ.ನಷ್ಟು ಅವ್ಯವಹಾರ ನಡೆದಿದೆ ಅನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಕಂಬಗಳನ್ನು ಸರಿಯಾಗಿ ಹಾಕಿಲ್ಲ, ವಯರ್‌ಗಳನ್ನು ಸಮರ್ಪಕವಾಗಿ ಅಳವಡಿಸಿಲ್ಲ. ದೊಡ್ಡ ಅವ್ಯವಹಾರವಾಗಿದೆ ಎಂದು ಆರೋಪಿಸಿದರು.

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ

ಇಷ್ಟು ದೊಡ್ಡ ಅವ್ಯವಹಾರದಲ್ಲಿ ಜೆಇ, ಎಇ ಅಮಾನತು ಮಾಡಲಾಗಿದೆ. ಆದರೆ ಇಷ್ಟು ದೊಡ್ಡ ಹಗರಣವನ್ನು ಇವರಿಬ್ಬರೆ ಮಾಡಲಾಗುತ್ತದೆಯೆ. ಸುಮಾರು 40 ಅಧಿಕಾರಿಗಳು ಈ ಯೋಜನೆ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಪ್ರಯೋಗ ಮಾಡುವ ಪ್ರಯತ್ನವಾಯಿತಾ? ಈ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಗೃಹ ಸಚಿವರನ್ನು ಒತ್ತಾಯಿಸುತ್ತೇನೆ ಎಂದರು.

ಸ್ಮಾರ್ಟ್ ಸಿಟಿ ಯೋಜನೆ

ಇದರಲ್ಲಿ ಮಾಡಲ್ ಸಬ್ ಡಿವಿಷನ್‌ಗೆ 30 ಕೋಟಿ ರೂ., IPDSಗೆ 75 ಕೋಟಿ ರೂ. ನೀಡಲಾಗಿದೆ. ಯು.ಜಿ ಕೇಬಲ್ ಅಳವಡಿಕೆ ಯೋಜನೆ ಇದು. ಇದರಲ್ಲೂ ದೊಡ್ಡ ಪ್ರಮಾಣದ ಅವ್ಯವಹಾರವಾಗಿದೆ. ಇನ್ನಷ್ಟು ದಾಖಲೆ ಸಂಗ್ರಹ ಮಾಡಲಾಗುತ್ತಿದೆ ಎಂದರು.

AVvXsEiMo7qChOxYrMbQNoFtSumAZgDM

‘ಜಿಲ್ಲಾ ಮಂತ್ರಿಗಳ ವೈಫಲ್ಯ’

ದೇವಕಾತಿಕೊಪ್ಪದಲ್ಲಿ ವಿದ್ಯುತ್ ಪೂರೈಕೆಗೆ ಸಬ್‌ಸ್ಟೇಷನ್ ಸ್ಥಾಪನೆ ಮಾಡುವ ಯೋಜನೆ ಇತ್ತು. 10 ಕೋಟಿ ರೂ. ವೆಚ್ಚದಲ್ಲಿ ಮಾಡಬಹುದಾದ ಯೋಜನೆಗೆ 15 ಕೋಟಿ ರೂ. ವೆಚ್ಚ ಮಾಡಲಾಗಿದೆ. ದೇವಕಾತಿಕೊಪ್ಪದಲ್ಲಿ ಸಬ್ ಸ್ಟೇಷನ್ ಮಾಡುವ ಬದಲು ಆಲ್ಕೊಳದಿಂದ ಯು.ಜಿ.ಕೇಬಲ್ ಮೂಲಕ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಈಗ ಜಿಲ್ಲಾಧಿಕಾರಿ ಅವರು ಸಭೆಯಲ್ಲಿ ಮಾತನಾಡಿ, ಅಗತ್ಯ ಬಿದ್ದರೆ ಸಬ್‌ಸ್ಟೇಷನ್ ಸ್ಥಾಪನೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಈಗ 15 ಕೋಟಿ ರೂ. ನೀರಿನಲ್ಲಿ ಹೋಮ ಮಾಡಿದಂತಾಗಿದೆ. ಇದು ಜಿಲ್ಲಾ ಸಚಿವರ ವೈಫಲ್ಯಕ್ಕೆ ಸಾಕ್ಷಿ ಎಂದು ಪ್ರಸನ್ನ ಕುಮಾರ್ ಆರೋಪಿಸಿದರು.

ABOUT ME DECEMBER REPORT

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 4, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment